ರಾಜಕೀಯ

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ಈ ಸುದ್ದಿಯನ್ನು ಶೇರ್ ಮಾಡಿ

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ  ವಿದಾಯ ಹೇಳಿದ್ದಾರೆ.

maithri

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಬಳಿಕ ಅಣ್ಣಾಮಲೈ ಅವರು ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಅಣ್ಣಾಮಲೈ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಇದರ ನಡುವೆ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ಭಾವಚಿತ್ರವಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. “ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ” ಎಂಬ ಸಂದೇಶವಿರುವ ಈ ಪೋಸ್ಟರ್‌ಗಳು ಅಣ್ಣಾಮಲೈ ಅವರ ಹೊಸ ರಾಜಕೀಯ ಹೆಜ್ಜೆಯ ಸುಳಿವು ನೀಡುತ್ತಿವೆ. 2021 ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಗೆ ಪ್ರಮುಖ ಕಾರಣರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts