ರಾಜಕೀಯ

ಡಿಕೆಶಿ ಸಂಪುಟದ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ!

Avg

ಈ ಸುದ್ದಿಯನ್ನು ಶೇರ್ ಮಾಡಿ

ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆದ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

maithri

ಜಲಸಂಪನ್ಮೂಲ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಇದರಿಂದ ತೃಪ್ತರಾಗದ ಅವರು, ನಗರಾಭಿವೃದ್ಧಿ ಖಾತೆ ಬೇಕೆಂದು ಪಟ್ಟು ಹಿಡಿದು, ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ. ಈ ವಿಚಾರ ಜನರಿಗೆ ತಿಳಿಯಬೇಕು ಎಂದು ಹೇಳಿದರು.

ಹಾಗೆಂದು ತನಗೆ ಯಾರ ಮೇಲೂ ಕೋಪವಿಲ್ಲ. ಯಾವ ಕಾರಣಕ್ಕೆ ತಾನು ರಾಜೀನಾಮೆ ನೀಡಿದ್ದೇನೆ ಎಂಬ ಸತ್ಯ ಜನರಿಗೆ ತಿಳಿಯಬೇಕಷ್ಟೇ. ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ ಎಂದರು.

ತಮ್ಮ ರಾಜಕೀಯ ಇತಿಹಾಸವನ್ನು ನೆನೆದ ರೆಡ್ಡಿ, ನಾನು ಸತತ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವನಾಗಿದ್ದೆ. ಆ ಬಳಿಕ ಸಿದ್ದರಾಮಯ್ಯ ಅವರ ಸಂಪುಟದಲ್ಲಿ 2 ಬಾರಿ ಸಚಿವರಾಗಿ ಕೆಲಸ ಮಾಡಿದ್ದೇನೆ. ಈ ಹಿಂದೆ ನನಗೆ ನೀಡಲಾಗಿದ್ದ ಎಲ್ಲಾ ಇಲಾಖೆಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ಇತಿಹಾಸ ನನಗಿದೆ. ನಾನು ಯಾವತ್ತೂ ಯಾವುದೇ ಮುಖ್ಯಮಂತ್ರಿಗಳ ಬಳಿ ಹೋಗಿ ಮಂತ್ರಿ ಮಾಡಿ ಎಂದಾಗಲಿ ಅಥವಾ ಇಂತಹದ್ದೇ ಇಲಾಖೆ ಬೇಕು ಎಂದಾಗಲಿ ಕೇಳಿರಲಿಲ್ಲ. ಈ ಬಾರಿಯೂ ನಾನು ಶಿವಕುಮಾರ್ ಅವರ ಬಳಿಯಾಗಲಿ ಅಥವಾ ಹೈಕಮಾಂಡ್ ಬಳಿಯಾಗಲಿ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಹಿಂದೆ ಡಿಕೆ ಶಿವಕುಮಾರ್, ‘ನಾನು ಎರಡೂವರೆ ವರ್ಷಗಳ ಆದ ಮೇಲೆ ಮುಖ್ಯಮಂತ್ರಿಯಾಗುತ್ತೇನೆ, ಆ ಸಂದರ್ಭದಲ್ಲಿ ನನ್ನ ಬಳಿ ಇರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೇ ಕೊಡುತ್ತೇನೆ’ ಎಂದು ಮಾತು ಕೊಟ್ಟಿದ್ದರು. ಆದರೆ ಈಗ ನನಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ ಎಂದು ತಮ್ಮ ಬೇಸರವನ್ನು ಹೊರಹಾಕಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…