ರಾಜಕೀಯ

ರಾಜ್ಯಸಭಾ ಚುನಾವಣೆ: ಡಿ.ವಿ., ಸುಮಲತಾ ಬಿಟ್ಟು ಪಕ್ಷ ಸಂಘಟಕರಿಗೆ ಮಣೆ ನೀಡಿದ ಬಿಜೆಪಿ!!

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಕೊನೆ ಕ್ಷಣದಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕೆಲವು ಪ್ರಮುಖ ನಾಯಕರಿಗೆ ಅವಕಾಶ ಕೈತಪ್ಪಿದಂತಾಗಿದೆ.

maithri

ಅತ್ಯಂತ ಗಮನ ಸೆಳೆದ ಬೆಳವಣಿಗೆಯೆಂದರೆ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಅಂತಿಮವಾಗಿ ಸಾಕಾರವಾಗಿಲ್ಲ. ಅದೇ ರೀತಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಈ ಬಾರಿ ಟಿಕೆಟ್ ದೊರಕಿಲ್ಲ.

ರಾಜ್ಯಸಭೆಗೆ ಎಂ. ನಾಗರಾಜ್ ಆಯ್ಕೆ

ಬಿಜೆಪಿ ತನ್ನ ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಘೋಷಿಸಿದೆ. ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ನಾಗರಾಜ್ ಅವರಿಗೆ ಹೈಕಮಾಂಡ್ ಮನ್ನಣೆ ನೀಡಿರುವುದು ವಿಶೇಷವಾಗಿದೆ.

ವಿಧಾನ ಪರಿಷತ್ತಿಗೆ ಇಬ್ಬರಿಗೆ ಅವಕಾಶ

ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಬಿಜೆಪಿ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದೆ. ಲಿಂಗರಾಜ್ ಪಾಟೀಲ್ ಅವರು ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರೆ, ರಘು ಕೌಟಿಲ್ಯ ರಾಜ್ಯ ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಚುನಾವಣೆಗೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕವು ಹಲವಾರು ಹಿರಿಯ ನಾಯಕರ ಹೆಸರನ್ನು ಕೇಂದ್ರ ನಾಯಕತ್ವಕ್ಕೆ ಶಿಫಾರಸು ಮಾಡಿತ್ತು. ರಾಜ್ಯಸಭೆ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ನಿರ್ಮಲ್ ಕುಮಾರ್ ಹಾಗೂ ಸುಮಲತಾ ಅಂಬರೀಶ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು. ಇನ್ನೊಂದೆಡೆ ವಿಧಾನ ಪರಿಷತ್ ಸ್ಥಾನಗಳಿಗೆ ರಘು ಕೌಟಿಲ್ಯ, ಪ್ರಮೋದ್ ಮಧ್ವರಾಜ್, ನಳಿನ್ ಕುಮಾರ್ ಕಟೀಲು, ಲಿಂಗರಾಜ್ ಪಾಟೀಲ್, ಮಂಜುಳಾ ಮತ್ತು ಶರಣು ತಳ್ಳಿಕೇರಿ ಸೇರಿದಂತೆ ಹಲವು ನಾಯಕರ ಹೆಸರುಗಳು ಪರಿಗಣನೆಯಲ್ಲಿದ್ದವು.

ಕೊನೆಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆಗೆ ಪ್ರೊ. ಎಂ. ನಾಗರಾಜ್ ಅವರನ್ನು ಹಾಗೂ ವಿಧಾನ ಪರಿಷತ್ತಿಗೆ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಅಧಿಕೃತ ಅಭ್ಯರ್ಥಿಗಳಾಗಿ ಘೋಷಿಸಿ ಚುನಾವಣಾ ಕಣಕ್ಕೆ ಇಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…