tamanvi
ರಾಜಕೀಯ

ಬೇಲೂರು ಶಾಸಕ ಎಚ್.ಕೆ. ಸುರೇಶ್ ಕಾರ್ಯಕರ್ತರ ಜೊತೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡ ಮತದಾನದ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿದರು.

maithri

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ಎಚ್.ಕೆ. ಸುರೇಶ್ ಆಶೀರ್ವಾದ ಪಡೆದರು. ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ತನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ, ಹುಂಡಿಗೆ ಕಾಣಿಕೆ ಹಾಕಿದರು.

“ನಾನು ಬಿ.ಜೆ.ಪಿ. ನಿಷ್ಠಾವಂತ ಕಾರ್ಯಕರ್ತನಾಗಿದ್ದು ಪಕ್ಷಕ್ಕೆ ದ್ರೋಹ ಮಾಡಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿಲ್ಲ. ಪಕ್ಷದ ವರಿಷ್ಠರು ಸೂಚಿಸಿದ ವ್ಯಕ್ತಿಗೆ ಮತದಾನ ಮಾಡಿದ್ದೇನೆ ಎಂದು ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಅವರು ಹೇಳಿದರು.

ನನ್ನ ಬೆಳವಣಿಗೆಯನ್ನು ಸಹಿಸದ ಕೆಲವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ದೇವಸ್ಥಾನಕ್ಕೆ ಹೋಗುವ ಮೊದಲು ಅಣ್ಣಪ್ಪಸ್ವಾಮಿ ಬೆಟ್ಟದಲ್ಲಿ ವಿಶೇಷ ಪ್ರಾರ್ಥನೆ ಮಾಡಿ, ನಾನು ಮೋಸ ಮಾಡಿಲ್ಲ. ಅಪಪ್ರಚಾರ ಮಾಡಿದವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಹೇಳಿ ತೆಂಗಿನ ಕಾಯಿ ಒಡೆದರು.

ಬರುವಾಗ ನೇತ್ರಾವತಿಯಲ್ಲಿ ತೀರ್ಥ ಪ್ರೋಕ್ಷಣೆ ಮಾಡಿ, ವಂದಿಸಿ, ಬಳಿಕ ದೇವರ ದರ್ಶನ ಮಾಡಿ, ಪೂಜೆ ಸಲ್ಲಿಸಿ ಶಾಸಕರು ಕಾರ್ಯಕರ್ತರ ಜೊತೆ ಆಣೆ ಪ್ರಮಾಣ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…