ರಾಜಕೀಯ

ಶೋಭಾ ಕರಂದ್ಲಾಜೆ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ ಅಂಟಿಸಿ ಆಕ್ರೋಶ!

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ, “ಕಾಂಗ್ರೆಸ್ ಮಕ್ಕಳು ಗಾಂಧೀಜಿ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನ ಮಕ್ಕಳು” ಎಂದು ಕಟುವಾಗಿ ನಿಂದಿಸಿ ಬರೆಯಲಾದ ಪೋಸ್ಟರ್‌ಗಳನ್ನು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಂಟಿಸಲಾಗಿದೆ.

ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts