ರಾಜಕೀಯ

ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ..!!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

akshaya college

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ಜ.6ರಂದು ಈ ಆಯ್ಕೆ ನಡೆಯಿತು.

ಯೂನಿಯನ್ ಉಪಾಧ್ಯಕ್ಷರಾಗಿ ನೀಲಯ್ಯ ಅಗರಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಡಿ.ಆ‌ರ್ ರಮೇಶ್‌ ಸೇರಿದಂತೆ ಯೂನಿಯನ್ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.

ಚುನಾವಣಾ ರಿಟರ್ನಿಂಗ್ ಅಧಿಕಾರಿ ಸುಧೀರ್ ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷರ ಪರಿಚಯ:

ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈರವರು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, 8 ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊತ್ತೇಸರರಾಗಿ, ನಿಡ್ನಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನ ಹಾಗೂ ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ 23 ವರ್ಷ ಅಧ್ಯಕ್ಷರಾಗಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪನಾ ಸಮಿತಿ ಕೋಶಾಧಿಕಾರಿಯಾಗಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪ್ರಸ್ತುತ ಪುತ್ತೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷರಾಗಿ, ಪುತ್ತೂರು ಟಿ.ಎ.ಪಿ.ಸಿ.ಎಂ.ಎಸ್.ನ ನಿರ್ದೇಶಕರಾಗಿ, ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರಾಗಿ, ಪಾಣಾಜೆ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 3ನೇ ಬಾರಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…