Gl jewellers
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ: ವಿಜಯೇಂದ್ರ ವಿರುದ್ಧ ಯತ್ನಾಳ್ ಬಣದ ಅಭ್ಯರ್ಥಿ ಸಿದ್ಧ?

Karpady sri subhramanya
ಕಮಲ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದ್ದು, ಹೈಕಮಾಂಡ್‌ ಮಧ್ಯ ಪ್ರವೇಶಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಕಮಲ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದ್ದು, ಹೈಕಮಾಂಡ್‌ ಮಧ್ಯ ಪ್ರವೇಶಿಸಿದೆ.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ಕೆಲವೇ ದಿನದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ವೈ ವಿಜಯೇಂದ್ರ ವಿರೋಧಿ ಬಣ ಸೂಕ್ತ ಅಭ್ಯರ್ಥಿಯನ್ನ ಸ್ಪರ್ಧೆಗೆ ರೆಡಿಯಾಗುತ್ತಿದಾರೆ ಎನ್ನಲಾಗಿದೆ.

ಹಾಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಸಮರ್ಥ ಅಭ್ಯರ್ಥಿಯೊಬ್ಬರನ್ನು ಕಣಕ್ಕೆ ಇಳಿಸುವ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ಚಿಂತನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರ ಹಾಗೂ ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ ಅವರನ್ನ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಯತ್ನಾಳ್‌ ಬಣ ಚಿಂತನೆ ನಡೆಸಿದೆ. ಈಗಾಗಲೇ ಕುಮಾರ್‌ ಬಂಗಾರಪ್ಪ ಅವರ ನಿವಾಸದಲ್ಲಿ ಯತ್ನಾಳ್‌ ಬಣ ಈ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಬಣದಲ್ಲಿರುವ ಕುಮಾರ ಬಂಗಾರಪ್ಪ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಕುಮಾರ ಬಂಗಾರಪ್ಪ ಅವರು ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ. ನಾನು ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದೀಗ ಕಮಲ ಪಾಳಯದಲ್ಲಿಯ ಬಣ ಬಡಿದಾಟವನ್ನ ಶಮನಗೊಳಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದ್ದು, ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್ ಅವರು ಬಿಜೆಪಿ ಶಾಸಕರ ಜೊತೆಗೆ ಸರಣಿ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಒಂದು ಕಡೆ ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವರು ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದರೆ, ಮತ್ತೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣ ನವದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಅವರನ್ನು ಭೇಟಿಯಾಗಿ ಇವರ ವಿರುದ್ಧ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts