Gl jewellers
ರಾಜಕೀಯ

ಎಂಟು ಮಹತ್ವದ ನಿರ್ಣಯ ಕೈಗೊಂಡ ಎಸ್.ಡಿ.ಪಿ.ಐ. | ಡ್ರಗ್ಸ್ ವಿರುದ್ಧ ಸಮರ, ಜಿಲ್ಲಾ ಕೇಂದ್ರ – ಮೆಡಿಕಲ್ ಕಾಲೇಜಿಗೆ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಅನ್ವರ್ ಸಾದತ್

Karpady sri subhramanya
ಜಿಲ್ಲಾ ಕೇಂದ್ರವಾಗಲು ಎಲ್ಲಾ ಸೌಲಭ್ಯಗಳಿರುವ ಪುತ್ತೂರನ್ನು ಸರಕಾರ ಹೊಸ ಜಿಲ್ಲೆಯಾಗಿ ಘೋಷಿಸಬೇಕು ಎಂದು ಎಸ್‍ ಡಿಪಿಐ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ಜಿಲ್ಲಾ ಕೇಂದ್ರವಾಗಲು ಎಲ್ಲಾ ಸೌಲಭ್ಯಗಳಿರುವ ಪುತ್ತೂರನ್ನು ಸರಕಾರ ಹೊಸ ಜಿಲ್ಲೆಯಾಗಿ ಘೋಷಿಸಬೇಕು ಎಂದು ಎಸ್‍ ಡಿಪಿಐ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದ.ಕ.ಜಿಲ್ಲೆ ಭೌಗೋಳಿಕವಾಗಿ ವಿಶಾಲ ಪ್ರವೇಶವಾಗಿದ್ದು, ಆಡಳಿತಾತ್ಮಕ ಸುಲಭ ನಿರ್ವಹಣೆ ಮತ್ತು ಸಾವರ್ಜನಿಕರ ಅನುಕೂಲಕ್ಕಾಗಿ ಪುತ್ತೂರನ್ನು ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

Sampya jathre

ಈಗಾಗಲೇ ರಾಜ್ಯ ಸರಕಾರದ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್‍ ಗಳ ಓಡಾಟದಲ್ಲಿ ಕಡಿತ ಕಂಡು ಬಂದಿದೆ. ಪುತ್ತೂರು, ಧರ್ಮಸ್ಥಳ, ಉಪ್ಪಿನಂಗಡಿಯಿಂದ ಮಂಗಳೂರಿಗೆ ಸಂಚರಿಸುವ ಬಹುತೇಕ ಬಸ್‍ ಗಳನ್ನು ಹಿಂಪಡೆಯಲಾಗಿದೆ. ಹೆಚ್ಚುವರಿ ಬಸ್‍ ಗಳನ್ನು ಓಡಿಸಲು ಕ್ರಮ ಕೈಗೊಳ್ಳಬೆಕು. ಅಲ್ಲದೆ ಖಾಸಗಿ ಬಸ್‍ ಗಳಲ್ಲಿ ಬಾಗಿಲಿನ ವ್ಯವಸ್ಥೆ ಅಳಡಿಸುವಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜಿಲ್ಲೆಯ ಬಹುತೇಕ ಜನತೆಯ ಬೇಡಿಕೆಯಾದ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು, ಅರಬ್ಬಿ ಸಮುದ್ರ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಸುಂದರ ಪ್ರದೇಶವಾದ ದ.ಕ.ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದಕ್ಕಾಗಿ ಮುಂದಿನ ಬಜೆಟ್ ನಲ್ಲಿ ಮೂರು ಸಾವಿರ ಕೋಟಿ ಮೀಸಲಿಡಬೇಕು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವುದು ಅಪಾಯಕಾರಿಯಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು, ಈ ಕುರಿತು ಶಾಲೆ, ಮನೆ ಮನೆಗಳಲ್ಲಿ ಸರಕಾರದ ವತಿಯಿಂದ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕು, ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಮಂದಗತಿಯಿಂದ ನಡೆಯುತ್ತಿದ್ದು, ಪರಿಣಾಮ ವಾಹನ ಸವಾರರು ಕೆಸರು, ಧೂಳಿನಿಂದ ಕೂಡಿದ ರಸ್ತೆಯಲ್ಲಿ ಜೀವಭಯದಿಂದ ಸಂಚಾರ ನಡೆಸುವಂತಾಗಿದೆ. ಇದನ್ನು ಸರಕಾರ ಗಂಭಿರವಾಗಿ ತೆಗೆದುಕೊಂಡು ಗರಿಷ್ಠ ಮಾರ್ಚ್ ತಿಂಗಳ ಒಳಗಾಗಿ ಸಂಪೂರ್ಣಗೊಳಿಸಬೇಕು, ಮಂಗಳೂರು ಸೇರಿದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಮೆಡಿಕಲ್ ಮಾಫಿಯಾ ಪ್ರಭಾವಿಯಾಗಿದ್ದು, ಅದನ್ನು ನಿಯಂತ್ರಿಸಲು ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಪಾಲಕ್ಕಾಡ್, ಮೈಸೂರು, ಕೊಂಕಣ್‍ ರೈಲ್ವೇಯನ್ನು ವಿಭಜಿಸಿ ಪ್ರತ್ಯೇಕ ಮಂಗಳೂರು ರೈಲ್ವೇ ವಲಯವನ್ನು ಸ್ಥಾಪಿಸಲು ಕೇಂದ್ರ ಸರಕಾರ ಕ್ರಮಕೈಗೊಳ್ಳಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‍ ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಇನಾಸ್‍ ರೋಡ್ರಿಗಸ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್‍, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್‍ ಬಾವು, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್‍ ಕಲಾಂ ಸುಳ್ಯ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts