ದೇವೇಗೌಡರು ತಮ್ಮ ಜೀವನದ ಕೊನೆ ಆಸೆ ಏನೆಂದು ಹೇಳಿ ಕಣ್ಣೀರು ಹಾಕಿದ್ದಾರೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು (Mahadayi River) ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾ ಮಾಡೋಣ. ನಾನು ಇನ್ನು 4-5 ವರ್ಷ ಬದುಕಿರುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ. ನನ್ನ ಜೀವನದ ಕೊನೆ ಆಸೆ ಇದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಹೇಳಿದರು.
ಅಲ್ಲದೆ ರಾಜ್ಯಕ್ಕೆ ನೀರಿನ ವಿಷಯದಲ್ಲಿ ನ್ಯಾಯ ಸಿಗಬೇಕು. ಅದೇ ನನ್ನ ಜೀವನದ ಕೊನೆಯ ಆಸೆ. ಈ ದೇಹ ಅಂತ್ಯ ಆಗುವುದರ ಒಳಗಾಗಿ ನಮ್ಮ ರಾಜ್ಯಕ್ಕೆ ನೀರಾವರಿ ವಿಷಯದಲ್ಲಿ ಆಗಿರುವ ಅನ್ಯಾಯ ಸರಿ ಹೋಗಬೇಕು. ನಾನು ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಿನ ಸಮಸ್ಯೆ ಬಗೆಹರಿಸಬೇಕು ಎನ್ನುವ ಛಲವಿದೆ, ಬಗೆಹರಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಭಾವುಕರಾಗಿ ಹೇಳಿದರು.
ಜೊತೆಗೆ 25 ಟಿಎಂಸಿ ನೀರು ಕರ್ನಾಟಕಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ. ಎಲ್ಲಿಯವರೆಗೆ ಯೋಜನೆ ಆಗಿದೆ, ಅಲ್ಲಿಯವರೆಗೆ ನೋಡಿಕೊಂಡು ಬರೋಣ ಎಂದರು.