ರಾಜಕೀಯ

ಕೈ ನಾಯಕ ಶಶಿ ತರೂರ್‌ಗೆ ಟಾಂಗ್ ಕೊಟ್ಟ ರಾಹುಲ್ ಗಾಂಧಿ!

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಇಲ್ಲಿನ ಇಂದಿರಾ ಭವನದಲ್ಲಿ, ಶಿಸ್ತು, ಒಗ್ಗಟ್ಟು, ರಾಜ್ಯ ಸಂಘಟನೆಯ ಬಲವರ್ಧನೆಯನ್ನು ಧ್ಯೇಯವಾಗಿಟ್ಟುಕೊಂಡು ಸಭೆ ನಡೆಸಲಾಗಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳದ ಕಾಂಗ್ರೆಸ್‌ ಒಂದಾಗಿ ನಿಂತಿದ್ದು, ನಾವೆಲ್ಲಾ ಒಂದೇ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದೇವೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. 

akshaya college

ಈ ಮೂಲಕ, ‘ಕೇರಳ ಕಾಂಗ್ರೆಸ್‌ ಘಟಕ ಒಡೆದ ಮನೆಯಾಗಿದೆ. ಅದನ್ನು ಯಾರೂ ಸರಿ ಮಾಡಲು ಪ್ರಯತ್ನಿಸುತ್ತಿಲ್ಲ. ಪಕ್ಷಕ್ಕೆ ನಾನು ಬೇಡ ಎಂದರೆ ನನಗೆ ಬೇರೆ ಬೇರೆ ಅವಕಾಶಗಳಿವೆ’ ಎಂದು ಇತ್ತೀಚೆಗೆ ಹೇಳಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. 

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಇಲ್ಲಿನ ಇಂದಿರಾ ಭವನದಲ್ಲಿ, ಶಿಸ್ತು, ಒಗ್ಗಟ್ಟು, ರಾಜ್ಯ ಸಂಘಟನೆಯ ಬಲವರ್ಧನೆಯನ್ನು ಧ್ಯೇಯವಾಗಿಟ್ಟುಕೊಂಡು ಸಭೆ ನಡೆಸಲಾಗಿತ್ತು. ಈ ವೇಳೆ ರಾಜಕೀಯ ತಂತ್ರಗಳ ಬಗ್ಗೆ ಎಚ್ಚರಿಕೆಯಿಂದಿದ್ದು, ಪಕ್ಷಕ್ಕೆ ವಿರುದ್ಧವಾಗಿ ಏನನ್ನೂ ಹೇಳಬಾರದು ಅಥವಾ ಮಾಡಬಾರದು ಎಂದು ರಾಹುಲ್‌ ಸೂಚಿಸಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಕೆ. ಸುಧಾಕರನ್‌, ತಿರುವನಂತಪುರಂ ಸಂಸದ ಶಶಿ ತರೂರ್‌ ಸೇರಿ ಹಲವು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. 

ಬಳಿಕ ಫೇಸ್‌ಬುಕ್‌ನಲ್ಲಿ ‘ಟೀಂ ಕೇರಳ’ ಎಂಬ ಹ್ಯಾಶ್‌ಟ್ಯಾಗ್‌ ನೊಂದಿಗೆ ಕೆಲ ನಾಯಕರ ಹೇಳಿಕೆಗಳನ್ನು ಪೋಸ್ಟ್‌ ಮಾಡಿರುವ ರಾಹುಲ್‌, ಒಗ್ಗಟ್ಟು ಪ್ರದರ್ಶನ ಮಾಡಿ ತರೂರ್‌ ಅವರಿಗೆ ತಿರುಗೇಟು ನೀಡಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…