Thursday, December 12
Share News

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.

ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಿಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು. ಸದ್ಯ ತಲೆ ಮರೆಸಿಕೊಂಡಿದ್ದಾನೆ. ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ಅಬೂಬಕ್ಕರ್ ಸಿದ್ದಿಕ್ ಪತ್ನಿಯ ಮನೆ ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯರಿನಲ್ಲಿರುವುದೆಂದು ಹೇಳಲಾಗುತ್ತಿದೆ.

2022ರ ಜು 26ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರ್ ಹತ್ಯೆಯಾಗಿತ್ತು. ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಮಾರಕಾಯುಧಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಈ ಪ್ರಕರಣದಡಿ ಹಲವು ಆರೋಪಿಗಳನ್ನು ಕರ್ನಾಟಕ ಪೊಲೀಸರು ಹಾಗೂ NIA ಬಂಧಿಸಿದ್ದರು ಪ್ರಮುಖ ಆರೋಪಿಗಳ ಬಂಧನವಾಗಿರಲಿಲ್ಲ.

ಪ್ರಮುಖ ಆರೋಪಿಗಳ ಬಂಧನಕ್ಕಾಗಿ NIA ನಗದು ಬಹುಮಾನ ಘೋಷಿಸಿ ಲುಕ್ ಔಟ್ ನೊಟೀಸ್ ಜಾರಿಗೊಳಿಸಿತ್ತು. ಆ ಬಳಿಕವು ಆರೋಪಿಗಳು ಸಿಕ್ಕಿರಲಿಲ್ಲ ಅವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಸ್ಥಳೀಯವಾಗಿ ಮೂಡಿದೆ


Share News

Comments are closed.

Exit mobile version