ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು
ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.
ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.
ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ