Friday, November 22
Share News

ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು.

ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು, ಬೆಳಗ್ಗೆ11 ಗಂಟೆಗೆ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು.

ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆ ನಡೆದಿದ್ದು, ಈ ಬಾರಿ 81.15 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದು, ವಾಣಿಜ್ಯ ವಿದ್ಯಾರ್ಥಿಳು 1.74,315, ಕಲಾವಿಭಾಗದಲ್ಲಿ 1,28, 448, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.

ಪಿಯುಸಿಯಲ್ಲಿ ವಿದ್ಯಾಲಕ್ಷ್ಮಿ ಪ್ರಥಮ ಸ್ಥಾನ ಪಡೆದಿದ್ದು, 600 ಕ್ಕೆ 598 ಅಂಕ ಪಡೆದಿದ್ದಾರೆ, ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದರೆ, ಉಡುಪಿ ಎರಡನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಗದಗ ಜಿಲ್ಲೆಗೆ ಕೊನೆಯ ಕೊನೆ ಸ್ಥಾನ ದೊರೆತಿದೆ.

ಈ ರೀತಿ ಮೊಬೈಲ್ ನಲ್ಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ

ಹಂತ 1: ನೀವು karresults.nic.in ಪಿಯುಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)

ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.


Share News

Comments are closed.

Exit mobile version