Thursday, December 12
Share News

ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಬುಧವಾರ ರಿಲೀಸ್ ಆಗಿದ್ದು ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

 ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಪ್ರದರ್ಶನಗೊಂಡಿದ್ದು ಈ ವೇಳೆ ಸಹಸ್ತ್ರ ಸಂಖ್ಯೆಯಲ್ಲಿ ನೆರೆದಿದ್ದ ಅಲ್ಲು ಅರ್ಜುನ್ ಅಭಿಮಾನಿಗಳು ಸೇರಿದ್ದು ಅದೇ ವೇಳೆ ಥಿಯೇಟರ್ ಗೆ ಆಗಮಿಸಿದ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು ಆಕೆಯ ಮಗ ಗಂಭೀರ ಗಾಯಗೊಂಡಿರುವ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಹಾಗೂ ಚಿತ್ರ ತಂಡ ಸೇರಿದಂತೆ ಥಿಯೇಟರ್ ಮಾಲೀಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ವಲಯ ಡಿಸಿಪಿ ಆಕಾನ್ ಯಾದವ್ ಖಚಿತಪಡಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 10:30ಕ್ಕೆ ಚಿತ್ರದ ಪ್ರೀಮಿಯ‌ರ್ ಶೋ ಪ್ರದರ್ಶನಗೊಂಡಿದ್ದು ಇದಕ್ಕೆ ದಿಲ್‌ಸುಮ್‌ನಗರದ ನಿವಾಸಿ ರೇವತಿ ಅವರು ತಮ್ಮ ಪತಿ ಭಾಸ್ಕ‌ರ್ ಮತ್ತು ಅವರ ಇಬ್ಬರು ಮಕ್ಕಳಾದ ಶ್ರೀ ತೇಜ್ (13) ಮತ್ತು ಸಾನ್ವಿಕಾ (7) ಅವರೊಂದಿಗೆ ಬಂದಿದ್ದರು. ಈ ವೇಳೆ ಥಿಯೇಟರ್ ಒಳಗೆ ನಟ ಅಲ್ಲು ಅರ್ಜುನ್ ಆಗಮಿಸಿದ ಹಿನ್ನೆಲೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ನಡೆಸಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ ಬಳಿಕ ಪೊಲೀಸರು ಅಭಿಮಾನಿಗಳನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದು ಈ ವೇಳೆ ಓಡುವ ಭರದಲ್ಲಿ ಥಿಯೇಟರ್ ಗೇಟ್ ಮುರಿದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಬುಧವಾರ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವನ್ನು ಸಂಧ್ಯಾ ಥಿಯೇಟರ್ ನಲ್ಲಿ ನಡೆಸಲಾಗಿತ್ತು ಇದಕ್ಕಾಗಿ ಕೆಲ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು ಆದರೆ ನಟ ಅಲ್ಲು ಅರ್ಜುನ್ ಥಿಯೇಟರ್ ಗೆ ಭೇಟಿ ನೀಡುವ ಮಾಹಿತಿ ನಮಗೆ ನಿದಿರಲಿಲ್ಲ ಹಾಗಾಗಿ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಒಂದು ವೇಳೆ ಥಿಯೇಟರ್ ಮಾಲೀಕರು, ಅಥವಾ ಚಿತ್ರ ತಂಡ ಮೊದಲೇ ಈ ವಿಚಾರ ನಮಗೆ ತಿಳಿಸುತಿದ್ದರೆ ಹೆಚ್ಚಿನ ಭದ್ರತೆ ಒದಗಿಸಿ ಅವಘಡ ನಡೆಯದಂತೆ ತಡೆಗಟ್ಟಬಹುದಿತ್ತು ಎಂದಿದ್ದಾರೆ


Share News

Comments are closed.

Exit mobile version