Friday, November 22
Share News

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.

ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯವರು ಪವಾಡ ದೃಶ್ಯದಿಂದ ಪಾರಾಗಿದ್ದಾರೆ ಮನೆ ಅರ್ಧ ಭಾಗ ಕುಸಿದಿತ್ತು 10 ಲಕ್ಷಕ್ಕಿಂತ ಅಧಿಕ ಹಾನಿಯಾಗಿದೆ.

ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ನಗರಸಭಾ ರಾದ ಫಾತಿಮತ್ ಜೋಹಾರ,,ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹ‌ರ್ ಆರ್ ಐ ಚಂದ್ರ ನಾಯಕ್ ಸಹಿತ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ.


Share News

Comments are closed.

Exit mobile version