Friday, November 22
Share News

ಧೀಮಂತ ಉದ್ಯಮಿ-ಪರೋಪಕಾರಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಮುಂಬೈನ ವರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನೆರವೇರಿಸಲಾಯಿತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ರತನ್ ಟಾಟಾ ಅವರು ಬುಧವಾರ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧರಾಗಿದ್ದರು. ಇಂದು ಸಂಜೆ ಮುಂಬೈನ ವೋರ್ಲಿಯಲ್ಲಿರುವ ಶವಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಮುಂಬೈ ಪೊಲೀಸರು ಟಾಟಾ ಅವರಿಗೆ ಗನ್ ಸೆಲ್ಯೂಟ್ ಮೂಲಕ ಗೌರವ ಸಲ್ಲಿಸಿದರು.

ಪಾರ್ಸಿ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು ಎಂದು ಸ್ಮಶಾನದಲ್ಲಿದ್ದ ಅರ್ಚಕರೊಬ್ಬರು ತಿಳಿಸಿದ್ದಾರೆ.

ಅಂತ್ಯಕ್ರಿಯೆಯ ನಂತರ, ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ದಿವಂಗತ ಕೈಗಾರಿಕೋದ್ಯಮಿಯ ಬಂಗಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಮಲಸಹೋದರ ನೋಯೆಲ್ ಟಾಟಾ ಸೇರಿದಂತೆ ಉದ್ಯಮದ ದಿಗ್ಗಜರ ಕುಟುಂಬದ ಸದಸ್ಯರು ಮತ್ತು ಟಾಟಾ ಗ್ರೂಪ್‌ನ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಂತಹ ಉನ್ನತ ಅಧಿಕಾರಿಗಳು ವರ್ಲಿಯಲ್ಲಿರುವ ಸ್ಮಶಾನದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರ ಸಂಪುಟ ಸಹೋದ್ಯೋಗಿ ಪಿಯೂಷ್ ಗೋಯಲ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವು ಗಣ್ಯರು ರತನ್ ಟಾಟಾಗೆ ಅಂತಿಮ ನಮನ ಸಲ್ಲಿಸಿದರು.ra


Share News

Comments are closed.

Exit mobile version