ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ಆಟಗಾರರಲ್ಲಿ ಮೂವರು ರಿಟೈನ್ ಆಗಿದ್ದರೆ, ಇನ್ನುಳಿದ 19 ಪ್ಲೇಯರ್ಸ್ಗಳನ್ನು ಮೆಗಾ ಹರಾಜಿನ ಮೂಲಕ ಖರೀದಿಸಲಾಗಿದೆ.
ಆದರೆ ಈ ಹರಾಜಿನಲ್ಲಿ ಕೆಎಲ್ ರಾಹುಲ್ ಅವರ ಖರೀದಿಗೆ ಆರ್ಸಿಬಿ ಹೆಚ್ಚಿನ ಆಸಕ್ತಿ ತೋರದಿರುವುದು ಸ್ಪಷ್ಟವಾಗಿತ್ತು. ಏಕೆಂದರೆ ರಾಹುಲ್ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್ಸಿಬಿ ಮುಂದಾಗಿರಲಿಲ್ಲ. ಇದಕ್ಕೆ ಕಾರಣವೇನು ಎಂಬುದಕ್ಕೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ.
ಆರ್ಸಿಬಿ ತಂಡದ ಹರಾಜು ಟಾರ್ಗೆಟ್ ಲಿಸ್ಟ್ ಬಹಿರಂಗವಾಗಿದ್ದು, ಈ ಹರಾಜು ಪಟ್ಟಿಯಲ್ಲಿ ಕೆಎಲ್ ರಾಹುಲ್ ಅವರ ಹೆಸರು C ಪಟ್ಟಿಯಲ್ಲಿತ್ತು. ಅಂದರೆ ಆರ್ಸಿಬಿ ಪಾಲಿಗೆ ರಾಹುಲ್ ಮೊದಲ ಆಯ್ಕೆ ಆಗಿರಲಿಲ್ಲ. ಹೀಗಾಗಿಯೇ ಕೆಎಲ್ ರಾಹುಲ್ ಅವರ ಖರೀದಿಗೆ ಆರ್ಸಿಬಿ ಹೆಚ್ಚಿನ ಆಸಕ್ತಿ ತೋರಲಿಲ್ಲ.
ಹೀಗಾಗಿ 7 ಕೋಟಿ ರೂ. ಬಳಿಕ ಆರ್ಸಿಬಿ ಫ್ರಾಂಚೈಸಿ ಕನ್ನಡಿಗನಿಗಾಗಿ ಬಿಡ್ ಮಾಡಲು ಮುಂದಾಗಿಲ್ಲ. ಇದರೊಂದಿಗೆ ತವರು ತಂಡದ ಪರ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಬಹುಕಾಲದ ಕನಸು ಕಮರಿತು. ಇತ್ತ ರಾಹುಲ್ ಕಂಬ್ಯಾಕ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಕೂಡ ನಿರಾಸೆಗೊಂಡರು.
ಯುವ ವಿಕೆಟ್ ಕೀಪರ್ ಬ್ಯಾಟರ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 11 ಕೋಟಿ ರೂ. ವ್ಯಯಿಸಿದೆ. ಅದರಂತೆ ಇದೀಗ ಆರ್ಸಿಬಿ ತಂಡದಲ್ಲಿ ವಿಕೆಟ್ ಕೀಪರ್ಗಳಾಗಿ ಫಿಲ್ ಸಾಲ್ಟ್ ಹಾಗೂ ಜಿತೇಶ್ ಶರ್ಮಾ ಕಾಣಿಸಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:
ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.