ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ ಯಕ್ಷಗಾನ ತಾಳಮದ್ದಳೆ ಸೇವೆಯು ಶ್ರೀ ದೇವಿ ಸನ್ನಿಧಿಯಲ್ಲಿ ಅರ್ಚಕರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಹರೀಶ ಉಪಾಧ್ಯಾಯ ಮತ್ತು ರಾಘವೇಂದ್ರ ಪ್ರಸಾದರು ದೀಪೋಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದಲ್ಲಿ ದೇವಿಗೆ ಪ್ರಿಯವಾದ ಯಕ್ಷಗಾನ ಸೇವೆ ಹಿಂದಿನಿಂದಲೂ ನಡೆಯುತ್ತಿದ್ದು ಇಷ್ಟಾರ್ಥ ಸಿದ್ಧಿಗಾಗಿ ಈಗ ಆರಂಭಿಸಲ್ಪಡುತ್ತಿರುವ ತಾಳಮದ್ದಳೆಯು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾದ ಗಣರಾಜ ಕುಂಬಳೆ,ಉಪ್ಪಿನಂಗಡಿ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪಬಲ್ಯ ಶುಭ ಹಾರೈಸಿದರು.
ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹೇಮಂತ ಕುಮಾರ ರೈ, ಕಲಾಸಂಗಮದ ಅಧ್ಯಕ್ಷ ಚಂದ್ರ ದೇವಾಡಿಗ ನಗ್ರಿ, ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.




































