ಪುತ್ತೂರು: ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇವಾ ಸಮಿತಿ ನೇತೃತ್ವದಲ್ಲಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ. 13ರಂದು ವಿಜೃಂಭಣೆಯಿಂದ ನಡೆಯಿತು.
ಗುರುವಾರ ಗಣಪತಿ ಹೋಮ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಬೈದರುಗಳ ಗರಡಿ ಇಳಿಯುವುದು, ಕಿನ್ನಿದಾರು ಗರಡಿ ಇಳಿದು, ಪ್ರಾತಃಕಾಲ ದರ್ಶನ ಪಾತ್ರಿಗಳ ಸೇಟ್, ಬೈದರುಗಳ ಸೇಟ್ ನಂತರ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿಸೇವಾ ಸಮಿತಿ ಅಧ್ಯಕ್ಷ ಎನ್.ಶಿವಪ್ಪ ಪೂಜಾರಿ ನುಳಿಯಾಲು ಮತ್ತು ಸಮಿತಿ ಸದಸ್ಯರು ಹಾಗೂ ಕರ್ನಪ್ಪಾಡಿ ಮನೆಯವರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸಿ ಶ್ರೀ ಬೈದರ್ಕಕಳ ಗಂಧ ಪ್ರಸಾದ ಹಾಗೂ ಅನ್ನ ಪ್ರಸಾದ ಸ್ವೀಕರಿಸಿದರು.