ಧಾರ್ಮಿಕ

ಉತ್ಕೃಷ್ಟ ಜೀವನ‌ ಪದ್ಧತಿಯ ದಕ್ಷಿಣ ಕನ್ನಡ ಜಿಲ್ಲೆಗೆ ಮತೀಯ ಸಂಘರ್ಷದ ಅಪಕೀರ್ತಿ | ಉಬಾರ್ ಕಂಬಳೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ| ಒಂದೆಡೆ ಕಂಬಳ, ಇನ್ನೊಂದೆಡೆ ಸಸ್ಯಮೇಳ, ಆಹಾರ ಮೇಳ, ಬೋಟಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಜಿಲ್ಲೆಯ  ರೈತಾಪಿ ವರ್ಗದ ಬದುಕಿನೊಂದಿಗೆ ನಂಟು ಹೊಂದಿರುವ ಕಂಬಳ ಕ್ರೀಡೆಗೆ ಸರಕಾರದಿಂದ ದೊರಕಬೇಕಾದ ಸಹಾಯಧನವನ್ನು ದೊರಕಿಸುವುದಲ್ಲದೆ, ಹೆಚ್ಚುವರಿ ಪ್ರೋತ್ಸ್ಸಾಹ ಒದಗಿಸಲು ಶ್ರಮಿಸುತ್ತಿದ್ದೇನೆ. ಉತ್ಕಷ್ಠ ಜೀವನಪದ್ದತಿಯನ್ನು ಹೊಂದಿರುವ ದ.ಕ ಜಿಲ್ಲೆಗೆ ಮತೀಯ ಸಂಘರ್ಷ ಅಪಕೀರ್ತಿಯನ್ನು ತಂದೊಡ್ಡಿದೆ. ಇದನ್ನು ನಿವಾರಿಸುವ  ನಿಟ್ಟಿನಲ್ಲಿ ಪ್ರತಿಯೋರ್ವ ನಾಗರಿಕನೂ ಪ್ರಯತ್ನಿಸಿ ಒಂದೇ ತಾಯಿಯ ಮಕ್ಕಳಂತೆ ಸಹಬಾಳ್ವೆಯತ್ತ ಚಿತ್ತವಿರಿಸಬೇಕೆಂದು ಉಪ್ಪಿನಂಗಡಿಯ ಕಂಬಳ  ಸಮಿತಿಯ ಅಧ್ಯಕ್ಷ, ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಕರೆ ನೀಡಿದರು. 

ಅವರು ಇಲ್ಲಿನ ಕೂಟೇಲುವಿನ ದಡ್ಡು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.೨೨ರಂದು ಚಾಲನೆಗೊಂಡ `ಉಬಾರ್ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ತುಳುನಾಡಿನಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಆದರೆ ಅಲ್ಲಿ ಅಭಿವೃದ್ಧಿಯ ಕೊರತೆಯಿಂದ ಅಲ್ಲಿಗೆ ಜನರನ್ನು ಸೆಳೆಯಲು ಸಾಧ್ಯವಾಗುತ್ತಿಲ್ಲ. ಉಪ್ಪಿನಂಗಡಿಯ ಸಂಗಮ ಕ್ಷೇತ್ರವು ದಕ್ಷಿಣದ ಕಾಶಿಯಾಗಿದ್ದು, ಇದು ಉತ್ತರದ ಕಾಶಿಯಂತೆ ಪಾವಿತ್ರತೆಯನ್ನು ಪಡೆದಿದೆ. ಶಾಸಕನಾಗಿ ಇಲ್ಲಿಯ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ನಟೇಶ್ ಪೂಜಾರಿ  ಮಾತನಾಡಿ, ವ್ಯವಸಾಯದೊಂದಿಗೆ ನಮ್ಮ ಆಚಾರ- ವಿಚಾರಗಳು ಬೆರೆತು ಹೋಗಿವೆ. ಆದರೆ ಗದ್ದೆಗಳು ಮರೆಯಾದಂತಹ ಈ ಕಾಲಘಟ್ಟದಲ್ಲಿಯೂ ನಮ್ಮ ಆಚಾರ- ವಿಚಾರ- ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ಅದನ್ನು ಜಗದಗಲಕ್ಕೆ ಪಸರಿಸುವ ಕಾರ್ಯ ನಡೆಯುತ್ತಿರುವುದು ಪ್ರಶಂಸನೀಯ ಎಂದರು. 

ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯರಾದ ಮಲ್ಲಿಕಾ ಶೆಟ್ಟಿ ಮಲಾರುಬೀಡು ಮಾತನಾಡಿ, ಹಿಂದಿನ ಕಾಲದಲ್ಲಿ ಕಂಬಳವೆನ್ನುವುದು ಪುರುಷರಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಎಲ್ಲರಿಗೂ ಇದರಲ್ಲಿ ಪಾಲ್ಗೊಳ್ಳುವ ಅವಕಾಶ ಒದಗಿ ಬಂದಿದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಕಂಬಳ ಕ್ರೀಡೆಯನ್ನು ರಾಜ್ಯದ ರಾಜಧಾನಿಗೂ ಪರಿಚಯಿಸಿದ ಕೀರ್ತಿ ಶಾಸಕ ಅಶೋಕಣ್ಣನವರದ್ದು ಎಂದರು.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಯಕ್ , ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ರವೀಂದ್ರ ಶೆಟ್ಟಿ ನುಳಿಯಾಲು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಅವಿನಾಶ್ ಎಚ್. ಗೌಡ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ, ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ರಾಜೇಶ್ ಶೆಟ್ಟಿ, ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಸಂಕಪ್ಪ ಶೆಟ್ಟಿ, ಕಾಂಗ್ರೆಸ್‌ನ ನಗರಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ  ಪ್ರಭು, ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು,  ಉಪಾಧ್ಯಕ್ಷರಾದ ವಿದ್ಯಾಧರ ಜೈನ್ ಪದ್ಮವಿದ್ಯಾ,  ಮುರಳೀಧರ ರೈ ಮಠಂತಬೆಟ್ಟು, ರಾಮಚಂದ್ರ ಮಣಿಯಾಣಿ, ಸುದೇಶ್ ಶೆಟ್ಟಿ ಶಾಂತಿನಗರ, ಜಗನ್ನಾಥ ಶೆಟ್ಟಿ ನಡುಮನೆ, ಮೋನಪ್ಪ ಗೌಡ ಪಮ್ಮನಮಜಲು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಕರಾಯ, ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಎಸ್. ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ದಿಲೀಪ್ ಶೆಟ್ಟಿ ಕರಾಯ, ವಿಜಯ ಪೂಜಾರಿ, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಕುಮಾರನಾಥ ಪಲ್ಲತ್ತಾರು, ಪಶು ವೈದ್ಯಾಧಿಕಾರಿ ಡಾ. ಧರ್ಮಪಾಲ್, ಪ್ರಮುಖರಾದ ಅನಿ ಮಿನೇಜಸ್, ನಝೀರ್ ಮಠ, ವಿಕ್ರಂ ಶೆಟ್ಟಿ ಅಂತರ, ಕೃಷ್ಣ ಜಿ. ರಾವ್ ಆರ್ತಿಲ, ಸಂದೀಪ್ ಕುಪ್ಟೆಟ್ಟಿ, ರೂಪೇಶ್ ರೈ ಅಲಿಮಾರ್ ಮತ್ತಿತರರು ಉಪಸ್ಥಿತರಿದ್ದರು. 

 ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ನಿಹಾಲ್ ಶೆಟ್ಟಿ ವಂದಿಸಿದರು. ಕಂಬಳ ಸಮಿತಿಯ ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಮೆರವಣಿಗೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ರಥಬೀದಿ, ಬ್ಯಾಂಕ್ ರಸ್ತೆಯಾಗಿ, ರಾಷ್ಟ್ರಿಯ ಹೆದ್ದಾರಿಯಾಗಿ ಕೂಟೇಲುವಿನ ಕಂಬಳ ಕರೆಯವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಕೊಂಬು ಕಹಳೆ, ಬ್ಯಾಂಡ್ ವಾದ್ಯಗಳಲ್ಲದೆ, ಕೀಲು ಕುದುರೆ, ತಟ್ಟಿರಾಯ, ಗೊಂಬೆ ಕುಣಿತಗಳು ಮೆರವಣಿಗೆಗೆ ಆಕರ್ಷಣೆ ಒದಗಿಸಿದವು. ಕಂಬಳಾಭಿಮಾನಿಗಳು ಮೆರವಣಿಗೆ ಪಾಲ್ಗೊಂಡರು.

………………………….

ಸಸ್ಯ ಮೇಳ, ಆಹಾರ ಮೇಳ, ಬೋಟಿಂಗ್

ಕAಬಳದ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟ ನಡೆಯುತ್ತಿದ್ದರೆ, ಇತ್ತ ಕಡೆ ನೇತ್ರಾವತಿ ನದಿ ಹಿನ್ನೀರಿನಲ್ಲಿ ಬೋಟಿಂಗ್, ದಡದಲ್ಲಿ ಸಸ್ಯ ಮೇಳ, ಆಹಾರ ಮೇಳ, ಮಕ್ಕಳ ಮನೋರಂಜನೆಗಾಗಿ ಪುಟಾಣಿ ರೈಲು, ಕೊಲಂಬಸ್ ನೌಕೆಗಳೂ ಕೂಡಾ ಇದ್ದು, ಕಂಬಳಕ್ಕೆ ಬಂದವರು ಜಾತ್ರೆಯ ಸವಿಯನ್ನು ಉಂಡರು. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…