ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಮಂಗಳವಾರ ಬೆಳಿಗ್ಗೆ ಗೊನೆ ಮುಹೂರ್ತ ನೆರವೇರಿಸಲಾಯಿತು.
ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು.
ಪ್ರಧಾನ ಅರ್ಚಕ ವೇ.ಮೂ.ವಿ.ಎಸ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಶಾಸಕ ಅಶೋಕ್ ಕುಮಾರ್ ರೈ, ಸಮಿತಿ ಸದಸ್ಯರು, ಭಕ್ತರು, ಕರಸೇವಕರು ಈ ವೇಳೆ ಉಪಸ್ಥಿತರಿದ್ದರು.