ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ ಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಇಂದು ಮೇ.12ರಂದು ಸೋಮವಾರ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ಅಧಿಕೃತ ಆಯ್ಕೆ ನಡೆಸಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿದು ಬಂದಿದೆ.

akshaya college

ಆಧ್ಯಕ್ಷತೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಮುಖಂಡರು ಸಭೆ ನಡೆಸಿ ಮಾತುಕತೆ ನಡೆಸಿ ಅಧ್ಯಕ್ಷತೆ ವಿಚಾರದಲ್ಲಿ ಸಮನ್ವತೆ ಸಾಧಿಸಿದ ಬಳಿಕ ಮಹೇಶ್ ಕುಮಾರ್ ಅವರನ್ನು ಅಧ್ಯಕ್ಷತೆಗೆ ಆಯ್ಕೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ. ನೂತನ ಸದಸ್ಯರು ಹಾಗೂ ಅಧ್ಯಕ್ಷರು ಸೋಮವಾರ ಅಧಿಕಾರ ವಹಿಸಿಕೊಳ್ಳಲಾಗುವುದು ಎಂದು ಮಹೇಶ್ ಕುಮಾ‌ರ್ ಕರಿಕ್ಕಳ ಅವರು ಖಚಿತಪಡಿಸಿದ್ದಾರೆ.

ಡಾ.ಬಿ.ರಘು, ಅಶೋಕ್ ನೆಹ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಹರೀಶ್ ಇಂಜಾಡಿ, ಲೀಲಾ ಮನಮೋಹನ, ಪ್ರವೀಣ ಮರುವಂಜ, ಸೌಮ್ಯ ಭರತ್‌, ಅಜಿತ್ ಅವರು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಮಹೇಶ್‌ಕುಮಾ‌ರ್ ಕರಿಕ್ಕಳ ಈ ಹಿಂದೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…