ಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭದ್ರತಾ ಕೋಶ ಕೊಡುಗೆ | ದಾನಿ ನಳೀಲು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಸನ್ಮಾನ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭದ್ರತಾ ಕೋಶ ಕೊಡುಗೆಯಾಗಿ ನೀಡಿದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರನ್ನು ಸನ್ಮಾನಿಸಲಾಯಿತು.

core technologies

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾರ್ಯ ಕ್ಷೇತ್ರದ ಆಡಳಿತ ಟ್ರಸ್ಟ್ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂತೋಷ್ ಕುಮಾರ್ ರೈ ಅವರು, ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭದ್ರತಾ ಕೋಶ ಸಮರ್ಪಿಸಲು ಅವಕಾಶ ಸಿಕ್ಕಿರುವುದು ತನ್ನ ಭಾಗ್ಯ. ಈ ಸನ್ಮಾನವನ್ನು ದೇವರ ಪ್ರಸಾದವೆಂದು ಸ್ವೀಕರಿಸುತ್ತೇನೆ ಎಂದರು.

akshaya college

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ಬಾರ್ಯ ಹಾಗೂ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರವೀಣ್ ಶಂಕರ್ ಸನ್ಮಾನಿಸಿದರು.

ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಎಸ್. ರೈ, ಡಾ ಸುಚೇತ  ಜೆ. ಶೆಟ್ಟಿ, ಸುರೇಶ್ ರೈ ಉಪಸ್ಥಿತರಿದ್ದರು.

ಭಾಸ್ಕರ್ ಬಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಟ್ರಸ್ಟ್ ಸದಸ್ಯೆ ನವೀನ ಬಾರ್ಯ ಅವರು ಸನ್ಮಾನ ಪತ್ರ ವಾಚಿಸಿದರು. ವಿಜಯಲಕ್ಷ್ಮಿ ಬಾರ್ಯ ವಂದಿಸಿದರು. ವಿದ್ಯಾ ಪ್ರಭಾಕರ್ ಬಾರ್ಯ ಸಹಕರಿಸಿದರು.

ಸಂತೋಷ್ ಕುಮಾರ್ ರೈ ಅವರ ಪುತ್ರಿಯರಾದ ಪ್ರಿಶಾ ಎಸ್. ರೈ, ಸಾನ್ವಿ ಎಸ್ ರೈ ಹಾಗೂ ದೇವಳದ ಭಕ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ | ಭಾರತ ದೇವಭೂಮಿ, ಬೆಳಕಿನ ದೇಶ: ಸೀತಾರಾಮ ಕೆದಿಲಾಯ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ…