ಧಾರ್ಮಿಕ

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ:ಸವಣೂರು ದೈವದ ನುಡಿ ನಿಜವಾಯಿತು!

ಗಾಲಿಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ದೈವ ನುಡಿದ ನುಡಿ ನಿಜವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವತಿ:ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ದೈವ ನುಡಿದ ನುಡಿ ನಿಜವಾಗಿದೆ.

Shani-pooja

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಸತ್ಯದ ದೈವಸ್ಥಾನ ಅರೇಲ್ತಾಡಿ ಶ್ರೀ ಉಲ್ಲಾಕ್ಕು,ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಬಿಡುಗಡೆಯ ಬಗ್ಗೆ ಕೇಳಿದಾ ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ಪಾತ್ರಿ ನುಡಿದಿದ್ದರು.

ದೈವ ನುಡಿದಂತೆ 27 ದಿನಕ್ಕೆ ಅಂದರೆ ಜೂ.11 ರಂದು ಜನಾರ್ದನ ರೆಡ್ಡಿಯವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದು ಕಾರ್ಣಿಕ ದೈವ ಕೆಡೆಂಜೊಡಿತ್ತಾಯಿ ದೈವದ ಅನುಗ್ರಹವಾಗಿದೆ ಎಂದು ಗಾಲಿ ಜನಾರ್ದನ ರೆಡ್ಡಿ ಆಪ್ತರು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿತ್ತು. ಇದರಿಂದ ಚಂಚಲಗೂಡ ಜೈಲಿನಲ್ಲಿದ್ದ ರೆಡ್ಡಿ ಬಿಡುಗಡೆಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…