Gl
ಧಾರ್ಮಿಕ

ಪುರಿ: ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: 3 ಮೃತ್ಯು, 10 ಮಂದಿಗೆ ಗಾಯ

ಒಡಿಶಾದ ಪುರಿಯಲ್ಲಿ ನಡೆದ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಒಡಿಶಾದ ಪುರಿಯಲ್ಲಿ ನಡೆದ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.

rachana_rai
Pashupathi

ಜಗನ್ನಾಥ, ಬಲಭದ್ರ ಮತ್ತು ಶುಭದ್ರ ದೇವಿಯ ವಿಗ್ರಹಗಳನ್ನು ಹೊತ್ತಿದ್ದ ಮೂರು ರಥಗಳು ಯಾತ್ರೆ ಪ್ರಾಂಭಿಸಿ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಶ್ರೀ ಗುಂಡಿಚಾ ದೇವಾಲಯದ ಬಳಿ ಬಂದಾಗ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ನಡೆದಿದೆ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

akshaya college

ಮೃತರನ್ನು ಪ್ರಭಾತಿ ದಾಸ್ ಮತ್ತು ಬಸಂತಿ ಸಾಹು ಮತ್ತು ಪ್ರೇಮಕಾಂತ್ ಮೊಹಂತಿ(70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಒಡಿಶಾದ ಖುರ್ದಾ ಜಿಲ್ಲೆಯವರೆಂದು ಹೇಳಲಾಗಿದೆ.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸಾವಿರ ವರ್ಷ ಇತಿಹಾಸದ ಪುತ್ತೂರು ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಷಡಾಧಾರ, ನಿಧಿಕುಂಭ ಪ್ರತಿಷ್ಠೆ

ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ…