ಧಾರ್ಮಿಕ

ಗಣೇಶೋತ್ಸವ ವೇಳೆ `ಡಿಜೆ’ ನಿಷೇಧ ಇಲ್ಲ: ಸಚಿವ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಮಾಡಿಲ್ಲ. ನಿಯಮಗಳ ಪ್ರಕಾರ ಬಳಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

akshaya college

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು.

ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಆದರೆ ಡಿಜೆ ನಿಷೇಧ ಮಾಡಿಲ್ಲ ಎಂದರು.

ಡಿಜೆ ನಿಷೇಧ ಎನ್ನುವ ಬಿಜೆಪಿಯ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್ ಇರಬೇಕು ಎನ್ನುವ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು. ಯುವಕರಿಗೆ 18ನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು ನಮ್ಮ ಕಾಂಗ್ರೆಸ್. ಹೀಗಿರುವಾಗ ನಾವು ಯುವಕರಿಗೆ ಹೇಗೆ ಡಿಜೆ ಬಳಕೆಗೆ ನಿಷೇಧ ಹೇರುತ್ತೇವೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…