pashupathi
ಧಾರ್ಮಿಕ

ಮತ್ತೊಮ್ಮೆ ವಿಜೃಂಭಿಸಲಿದೆ ಪುತ್ತೂರುದ ಪಿಲಿಗೊಬ್ಬು, ಫುಡ್ ಫೆಸ್ಟ್ | ಸೆ. 28ರಂದು ಪುತ್ತೂರುದ ಪಿಲಿಗೊಬ್ಬು, ಸೆ. 27ರ ಸಂಜೆಯಿಂದಲೇ ಆರಂಭಗೊಳ್ಳಲಿದೆ ಫುಡ್ ಫೆಸ್ಟ್

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿಜಯ ಸಾಮ್ರಾಟ್ ಪುತ್ತೂರು ವತಿಯಿಂದ ಸೆಪ್ಟೆಂಬರ್ 28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನ ಸೆಳೆಯುವಂತಹ ‘ಪುತ್ತೂರುದ ಪಿಲಿಗೊಬ್ಬು-2025’ ಸೀಸನ್ -3 ಹಾಗೂ ‘ಪುತ್ತೂರು ಪುಡ್ ಫೆಸ್ಟ್’ ನಡೆಯಲಿದೆ ಎಂದು ವಿಜಯ ಸಾಮ್ರಾಟ್ ಸಂಸ್ಥಾಪಕಾಧ್ಯಕ್ಷ, ಪಿಲಿಬೊಬ್ಬು ಸಮಿತಿ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದರು.

akshaya college

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಲಿವೇಷ ಕುಣಿತ’ ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದ ಪುತ್ತೂರುದ ಪಿಲಿಗೊಬ್ಬು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಮೂರನೇ ವರ್ಷದ ಪಿಲಿಗೊಬ್ಬು ನಡೆಯಲಿದೆ ಎಂದರು.

ಫುಡ್ ಫೆಸ್ಟ್ ಅನ್ನು ಸೆಪ್ಟೆಂಬರ್ 27 ಶನಿವಾರ ಸಂಜೆ 4 ಗಂಟೆಗೆ ಪುತ್ತೂರಿನ ಮುಳಿಯ ಜ್ಯುವೆಲ್ಲರ್ಸ್ ಆಡಳಿತ ನಿರ್ದೇಶಕ ಕೇಶವ್ ಪ್ರಸಾದ್ ಮುಳಿಯ ಅವರು ಉದ್ಘಾಟಿಸಲಿದ್ದಾರೆ. ಭಟ್ ಅಂಡ್ ಭಟ್ ಯೂಟ್ಯೂಬರ್ ಸುದರ್ಶನ ಭಟ್ ಬೆದ್ರಾಡಿ ಅವರು ಆಹಾರ ಮಳಿಗೆಗೆ ಚಾಲನೆ ನೀಡಲಿದ್ದಾರೆ. ಆಹಾರ ಮೇಳವು ಸೆಪ್ಟೆಂಬರ್ 27ರ ಶನಿವಾರ ಸಂಜೆ ಗಂಟೆ 4ರಿಂದ ರಾತ್ರಿ 11ರ ತನಕ, ಹಾಗೂ ಸೆಪ್ಟೆಂಬರ್ 28ರ ಬೆಳಗ್ಗೆ 10 ಗಂಟೆಯಿಂದ ರಾತ್ರಿ ತನಕ ನಡೆಯಲಿದೆ ಎಂದು ವಿವರಿಸಿದರು.

ಪಿಲಿಗೊಬ್ಬು ಕಾರ್ಯಕ್ರಮ ಸೆಪ್ಟೆಂಬರ್ 28 ಆದಿತ್ಯವಾರ ಬೆಳಗ್ಗೆ 10:30ಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಪಾದಂಗಳವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಿ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಜಿಎಲ್ ಆಚಾರ್ಯ ಜುವೆಲರ್ಸ್ ಇದರ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ಜಿ.ಎಲ್ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಪಿಲಿಗೊಬ್ಬು ವೇದಿಕೆಯ ಉದ್ಘಾಟನೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ನೆರವೇರಿಸಲಿದ್ದಾರೆ ಎಂದರು.

ಬಹುಮಾನಗಳ ವಿವರ

ಜಿಲ್ಲೆಯ ಪ್ರಖ್ಯಾತ ಆಯ್ದ 8 ಹುಲಿವೇಷ ತಂಡಗಳನ್ನು ಆಹ್ವಾನಿಸಿ ಅವರೊಳಗೆ ಉತ್ತಮ ನಿರ್ವಹಣೆ ಮಾಡಿದ ತಂಡಕ್ಕೆ ಪ್ರಥಮ ಬಹುಮಾನ ರೂ 3 ಲಕ್ಷ, ದ್ವಿತೀಯ ಬಹುಮಾನ 2 ಲಕ್ಷ ರೂ, ಹಾಗೂ ತೃತೀಯ ಬಹುಮಾನ 1 ಲಕ್ಷ ರೂ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು. ಪಂದ್ಯಶ್ರೇಷ್ಠ ಪುತ್ತೂರಿನ ಪಿಲಿಗೆ ಎಲ್.ಇ.ಡಿ. ಟಿವಿ ನೀಡಲಾಗುವುದು. ಮಾತ್ರವಲ್ಲದೆ ಭಾಗಿಯಾದ ತಂಡಗಳಿಗೂ ಗೌರವ ಸಂಭಾವನೆಯನ್ನು ನೀಡಿ ಗೌರವಿಸಲಾಗುವುದು. ಜೊತೆಗೆ ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ, ಗುಂಪು ಪ್ರಶಸ್ತಿ ವಿಭಾಗ ದಲ್ಲಿ ಉತ್ತಮ ತಾನೆ, ಉತ್ತಮ ಬಣ್ಣ, ಉತ್ತಮ ಧರಣಿ ಮಂಡಲ ಕುಣಿತ ವೈಯುಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಕಪ್ಪು ಹುಲಿ, ಮರಿ ಹುಲಿ ಪುತ್ತೂರುದ ಹುಲಿ, ಮುಡಿ ಹಾರಿಸುವುದು, ನಾಣ್ಯ ತೆಗೆಯುವುದಕ್ಕೆ ವಿಶೇಷ ಬಹುಮಾನವಿದೆ. ಪ್ರತಿ ತಂಡದಲ್ಲಿ 15 ಹುಲಿವೇಷ ಹಾಗೂ ಪ್ರತಿ ತಂಡಕ್ಕೆ ಹುಲಿ ವೇಷ ಕುಣಿತದ ಕಲಾ ಪ್ರದರ್ಶನ ನೀಡಲು 23 ನಿಮಿಷದ ಕಾಲಾವಕಾಶವಿರುತ್ತದೆ. ಅಂದರೆ 20 ನಿಮಿಷದ ಬಳಿಕ 1 ನಿಮಿಷ ಬ್ರೇಕ್. ನಂತರ 2 ನಿಮಿಷ. ಈ ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿದ ಜಿಲ್ಲೆಯ ಖ್ಯಾತ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

 

ತಾರಾ ಮೆರುಗು:

ಕಾರ್ಯಕ್ರಮ ವೀಕ್ಷಿಸಲು ತುಳುನಾಡಿನ ಹೆಸರಾಂತ ಕೋಸ್ಟಲ್ ವುಡ್ ಹಾಗೂ ರಾಜ್ಯದ ಹೆಸರಾಂತ ಸ್ಯಾಂಡಲ್ ವುಡ್ ನಟ ನಟಿಯರು ಭಾಗಿಯಾಗಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ತ್ರಿವಿಕ್ರಮ್, ಧನ್ ರಾಜ್ ಆಚಾರ್, ಧಾರಾವಾಹಿ ನಟಿ ವೈಷ್ಣವಿ ಗೌಡ, ಸು ಫ್ರಮ್ ಸೋ ತಂಡ ಭಾಗವಹಿಸಲಿದೆ.

ನಾಯಕರಾದ ಸಿಟಿ ರವಿ, ಸಂಸದ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮೊದಲಾದವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪುತ್ತೂರು ಫುಡ್ ಫೆಸ್ಟ್ ವಿಶೇಷತೆಗಳು:

ಪಗೋಡ ಮಾದರಿಯ ಸುಂದರ ಸುಸಜ್ಜಿತ ಆಹಾರ ಮಳಿಗೆಯಲ್ಲಿ ಬರ್ಗರ್, ಸ್ಯಾಂಡ್ ವಿಚ್, ವಿವಿಧ ಬಗೆಯ ದೋಸೆಗಳು, ವಿವಿಧ ಬಗೆಯ ಐಸ್ ಕ್ರೀಮ್ ಗಳು, ಮೊಕ್ ಟೈಲ್ ಜ್ಯೂಸ್, ಮಟ್ಕಾ ಸೋಡಾ, ಕರಾವಳಿಯ ರುಚಿಕರ ಖಾದ್ಯಗಳ ಸಹಿತ 50 ವಿವಿಧ ಖಾದ್ಯಗಳ ಮಳಿಗೆಗಳು ವಿಜೃಂಭಿಸಲಿದೆ ಎಂದರು.

ಪುತ್ತೂರು ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷ ಸುಜಿತ್ ರೈ ಪಾಳ್ತಾಡ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೋರಲು, ರತನ್ ರೈ ಕುಂಬ್ರ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…