pashupathi
ಧಾರ್ಮಿಕ

ಮಂಗಳೂರು ದಸರಾ ಶೋಭಾಯಾತ್ರೆ ಸಮಾರೋಪ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು.

akshaya college

ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.

ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.

ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…