ಧಾರ್ಮಿಕ

ನದಿ ಸಂರಕ್ಷಣೆ ಸೇರಿ 9 ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ | ಉಡುಪಿ ಪುತ್ತಿಗೆ ಮಠದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ – ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಜಲ ಸಂರಕ್ಷಣೆ, ನದಿಗಳ ಉಳಿಸುವಿಕೆ ಸೇರಿದಂತೆ ಪ್ರತಿಯೊಬ್ಬ ಭಾರತೀಯರು 9 ಸಂಕಲ್ಪಗಳನ್ನು ತೊಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

maithri

ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ-ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಮಠದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಲ್ಲಿ ಒಂದು ಮರ ನೆಡುವಂತೆ, ತಲಾ ಒಬ್ಬನಾದರೂ ಬಡವನಿಗೆ ಸಹಾಯ ಮಾಡುವಂತೆ, ಸ್ವದೇಶಿ, ಆತ್ಮನಿರ್ಭರ ಭಾರತಕ್ಕೆ ಬೆಂಬಲ, ಸಾವಯವ ಕೃಷಿಗೆ ಒತ್ತು, ಆರೋಗ್ಯಪೂರ್ಣ ಬದುಕು, ಯೋಗಾಭ್ಯಾಸ, ಹಸ್ತಪ್ರತಿಗಳ ಸಂರಕ್ಷಣೆಯ ಸಂಕಲ್ಪ ತೊಡುವಂತೆ ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮುಖಂಡರಾದ ಬಿ. ವೈ. ವಿಜಯೇಂದ್ರ, ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶಾಸಕರಾದ ವಿ ಸುನಿಲ್ ಕುಮಾರ್, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಡಿ ಹಾಗೂ ಗುರ್ಮೆ ಸುರೇಶ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…