ಧಾರ್ಮಿಕ

ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ ಉಡುಪಿಗೆ | ಡಿ. 7ರಂದು ನಡೆಯಲಿರುವ ಬೃಹತ್ ಗೀತೋತ್ಸವ ಸಮಾರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗೂ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.

maithri

ಡಿ. 7ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

ನ. 8ರಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನೆಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts