ಧಾರ್ಮಿಕ

ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

GL

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ವಿಧಿವಿಧಾನ ನಡೆಯಿತು.

chennai-shopping
maithri

ಬೆಳಿಗ್ಗೆ 9 ಗಂಟೆಯಿಂದ ತೋರಣ ಮುಹೂರ್ತ, ವಿಮಾನ ಶುದ್ಧಿ, ಷೋಡಶ ಕಲಶಾಭಿಷೇಕ ನಡೆಯಿತು. ಸಂಜೆ ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು.

105 ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.

ನಾಳೆ ಪಾದಾಭಿಷೇಕ:

ಮಂಗಳವಾರ ಬೆಳಿಗ್ಗೆ 8.30ಕ್ಕೆ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ತೆರಳಿ ಬಳಿಕ 216 ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…