tamanvi
ಧಾರ್ಮಿಕ

ಧರ್ಮಸ್ಥಳ: ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಯಿತು.

maithri

ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕ್ಷುಲ್ಲಕ ನಿರ್ವಾಣ ಸಾಗರ ಮಹಾರಾಜರು ಪಾದಾಭಿಷೇಕ ನೆರವೇರಿಸಿದರು.

ಮೂರ್ತಿಯ ಪ್ರತಿಷ್ಠಾಪಕರಾದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ವರ್ಮ, ಪೂರನ್‌ವರ್ಮ ಪಾದಾಭಿಷೇಕ ನೆರವೇರಿಸಿದರು.

ಪೂಜಾ ಮಂತ್ರ ಪಠಣ, ಬಾಹುಬಲಿ ಸೇವಾ ಸಮಿತಿಯ ಸದಸ್ಯರಿಂದ ಸುಶ್ರಾವ್ಯ ಜಿನಭಕ್ತಿ ಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.

216 ಕಲಶಗಳಿಂದ ಜಲಾಭಿಷೇಕದ ಬಳಿಕ ಇಕ್ಷುರಸ (ಕಬ್ಬಿನ ಹಾಲು), ಗಂಧ, ಚಂದನ, ಅರಿಶಿನ, ಕ್ಲಕಚೂರ್ಣ ಮೊದಲಾದ ಮಂಗಲದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.
ಪೂರ್ಣಕುಂಭದಿಂದ ಪಾದಾಭಿಷೇಕ, ಪುಷ್ಪವೃಷ್ಠಿ, ಮಹಾಮಂಗಳಾರತಿ ಹಾಗೂ ಶಾಂತಿಮಂತ್ರ ಪಠಣದೊಂದಿಗೆ ಸಮಾರಂಭ ಸಮಾಪನಗೊಂಡಿತು.

ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು:

ಮಂಗಲಪ್ರವಚನ ನೀಡಿದ ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಇಂದಿನ ಮಕ್ಕಳೆ ಮುಂದಿನ ಸಮಾಜದ ಅಮೂಲ್ಯ ಆಸ್ತಿಯಾಗಿದ್ದು ಬಾಲ್ಯದಿಂದಲೆ ಮನೆಯಲ್ಲಿ ಅವರಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಿ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಬೇಕು ಎಂದರು.

ಬಾಹುಬಲಿಯ ತ್ಯಾಗ, ಅಹಿಂಸೆ ವಿಶ್ವಮಾನ್ಯವಾಗಿದೆ. ಮೊದಲು ನಮ್ಮನ್ನು ನಾವು ಅರಿತುಕೊಂಡು, ಜೈನಧರ್ಮದ ಮರ್ಮವನ್ನರಿತು ವೃತ-ನಿಯಮಗಳ ಪಾಲನೆಯೊಂದಿಗೆ ಆದರ್ಶ ಜೀವನ ನಡೆಸಬೇಕು. ಮಕ್ಕಳು ನಮ್ಮ ಉತ್ತರಾಧಿಕಾರಿಗಳಾಗಿದ್ದು ಅವರಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

ಕ್ಷುಲ್ಲಕ ನಿರ್ವಾಣ ಸಾಗರ ಮಹಾರಾಜರು ಮಾತನಾಡಿ, ಜೈನಧರ್ಮದ ಸಾರವಾದ ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯ ಎಂಬ ತ್ರೈರತ್ನಗಳ ಪಾಲನೆಯಿಂದ ಮೋಕ್ಷ ಪ್ರಾಪ್ತಿ ಸಾಧ್ಯ ಎಂದರು.
ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚಿಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…