ಧಾರ್ಮಿಕ

ಫೆ. 15ರಿಂದ ಕೋರಿಯ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಪುನರ್‌ ಪ್ರತಿಷ್ಠಾ ಮಹೋತ್ಸವ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ   ಶ್ರೀ ದೈವಗಳ ಪುನರ್ ಪ್ರತಿಷ್ಠೆ ಕಲಾಶಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮಗಳು ಫೆ. 15ರಿಂದ 17ರವರೆಗೆ ನಡೆಯಲಿದೆ.

maithri

ಫೆ. 14ರಂದು ಸಂಜೆ ಹಸಿರು ವಾಣಿ ಸಮರ್ಪಣೆ ಮೆರವಣಿಗೆ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ನಡೆಯಲಿದೆ. ಫೆ. 15ರಂದು ಬೆಳಗ್ಗೆ 10.20ರ ಮುಹೂರ್ತದಲ್ಲಿ ತಂತ್ರಿಗಳಾದ ಗೋಪಾಲಕೃಷ್ಣ ಎಡಪಡಿತ್ತಾಯರ ನೇತೃತ್ವದಲ್ಲಿ ನೂತನ ದೈವಸ್ಥಾನದಲ್ಲಿ ಧರ್ಮದೈವ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳು, ಕುಲದೇವರಾದ ಮುದ್ದ- ಕಳಲ, ತನ್ನಿಮಾನಿಗ, ಕೊರಗ ತನಿಯ ಮತ್ತು ಚಾಮುಂಡಿ, ಗುಳಿಗ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ನಡೆಯಲಿದೆ.

ಅಂದು ಮಧ್ಯಾಹ್ನ 12 ಗಂಟೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಕುಣಿತ ಭಜನೆ, ಸಂಜೆ 7 ಗಂಟೆಗೆ ಧಾರ್ಮಿಕ ಉಪನ್ಯಾಸ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಧರ್ಮದೈವ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

ಫೆ. 16ರಂದು ಸಂಜೆ ಕುಣಿತ ಭಜನೆ, ನೃತ್ಯ ವೈಭವ, ಶಾಸಕ ಅಶೋಕ್ ರೈ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ಮೊಗೆರ್ಕಳ ಗರಡಿ ಇಳಿಯುವುದು, ತನ್ನಿಮಾನಿಗ ಗರಡಿ ಇಳಿಯುವುದು ನಡೆಯಲಿದೆ. 17ರಂದು ಬೆಳಗ್ಗೆ 8ರಿಂದ ಕೊರಗ ತನಿಯ ನೇಮೋತ್ಸವ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬೆಳ್ಳಿಪ್ಪಾಡಿ ಕಾರ್ತಿಕ್ ರೈ, ಸಂಚಾಲಕರಾದ ಮೋಹನ ಪಕಳ ಕುಂಡಾಪು, ಲಕ್ಷ್ಮಣ ಗೌಡ ಕಂಬಳದಡ್ಡ, ಗೌರವ ಸಲಹೆಗಾರ ಸುಂದರ ಸಾಲಿಯಾನ್ ಬಾರ್ಪಾದೆ, ಆಡಳಿತ ಮಂಡಳಿ ಕಾರ್ಯದರ್ಶಿ ಜಗದೀಶ್ ಕಜೆ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…