ಧಾರ್ಮಿಕ

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ -ಶಿಲಾನ್ಯಾಸ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ಫೆ. 21ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

chennai-shopping
maithri

ಕ್ಷೇತ್ರದ ತಂತ್ರಿಗಳಾದ ಕುಂಟಾರು ರವೀಶ್‌ ತಂತ್ರಿ ಅವರ ನೇತೃತ್ವದಲ್ಲಿ ವಾಸ್ತುಶಿಲ್ಪಿ ಸಿ. ಎಸ್.ಎಂ ಪ್ರಸನ್ನ ಮುನಿಯಂಗಳ್‌ ಅವರ ಉಪಸ್ಥಿತಿಯಲ್ಲಿ ಶ್ರೀ ದೇವರ ರಾಜಾಂಗಣದ ಐದು ಕಟ್ಟೆಗಳು, ಅಯ್ಯಪ್ಪ ಗುಡಿ, ಸಭಾಭವನ, ಕೆರೆ ಜೀರ್ಣೋದ್ಧಾರ, ಅಶ್ವಥಕಟ್ಟೆ, ಮೊದಲಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೇರವೇರಲಿದೆ. ನಂತರ ಬೆಳಗ್ಗೆ 9 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನೇರವೇರಲಿದೆ.

ಪುತ್ತೂರು ಶಾಸಕ ಹಾಗೂ ಪುತ್ತೂರು ದೇವಸ್ಥಾನದ ಜೀರ್ಣೂದ್ಧಾರ ಸಮಿತಿಯ ಅಧ್ಯಕ್ಷರಾದ ಅಶೋಕ್‌ ಕುಮಾರ್‌ ರೈ ಅವರು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಗ್ಗೆ ಪುತ್ತೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀ ಈಶ್ವರ ಭಟ್‌ ಪಂಜಿಗುಡ್ಡೆ ಮಾಹಿತಿ ನೀಡಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಜೀರ್ಣೋದ್ಧಾರ ಕಾರ್ಯದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ..


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಜಾತ್ರೆಗೆ ಮೆಸ್ಕಾಂ ಮುಂಜಾಗ್ರತೆ!! ದೇವರ ಪೇಟೆ ಸವಾರಿಯ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಕಾರ್ಯ

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂದಣಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಸ್ಥಾನಕ್ಕೆ ಅಕ್ಕಿ, ಸಾಮಗ್ರಿ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…