tamanvi
ಧಾರ್ಮಿಕ

ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗತನಿಯ ಕ್ಷೇತ್ರದಲ್ಲಿ ನೇಮೋತ್ಸವ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಶನಿವಾರ ಹಾಗೂ ಭಾನುವಾರ ನಡೆಯಿತು.

dambethimar

ಶನಿವಾರ ಸಂಜೆ ದೈವಗಳ ಭಂಡಾರ ಇಳಿಸಿ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ನೆರವೇರಿತು. ಬಳಿಕ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ ದೈವಗಳ ನೇಮೋತ್ಸವ ಜರಗಿತು.

dambethimar

ಭಾನುವಾರ ಬೆಳಿಗ್ಗೆ ಕೊರಗ ತನಿಯ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆದು, ಅನ್ನಸಂತರ್ಪಣೆಯೊಂದಿಗೆ ವಾರ್ಷಿಕ ನೇಮೋತ್ಸವ ಸಂಪನ್ನಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts