ಧಾರ್ಮಿಕ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ: ನಾಳೆ ಪೂರ್ವಭಾವಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ಸಮರ್ಪಿಸಲಾಗುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

maithri

ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ.

ಮೇ 6ರಂದು ಸಂಜೆ ಜಗದ್ಗುರುಗಳು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು, ಮೇ 7ರಂದು ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮ ಜರಗಲಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಗುರುವಂದನಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಪುತ್ತೂರಿಗರ ವತಿಯಿಂದ ಜಗದ್ಗುರುಗಳ ವಂದನೆಗೆ ಭರದ ಸಿದ್ಧತೆ ನಡೆಯುತ್ತಿದೆ. ಹಿಂದೂ ಸಮಾಜದ ಸಮಸ್ತ ಸಮುದಾಯಗಳನ್ನೊಳಗೊಂಡ ಗುರುವಂದನಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ, ವಿದ್ಯಾ ಸಂಕಲ್ಪ | ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕರೆ

ಪುತ್ತೂರು: ಪ್ರಸ್ತುತ ವರ್ಷದ ಶಾಲಾ ಹಾಗೂ ಕಾಲೇಜುಗಳ ಆರಂಭದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ…

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…