ಧಾರ್ಮಿಕ

ಮೇ 7ರಂದು ಪುತ್ತೂರಿಗೆ ಶೃಂಗೇರಿ ಶ್ರೀ ಆಗಮನ: ಬಂಟ ಸಮಾಜದಿಂದ ಗುರುವಂದನೆ, ಪಾದಪೂಜೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ ಸಮಾಜಕ್ಕೆ ಗುರುಪೀಠವಾಗಿರುವ ಶೃಂಗೇರಿಯೊಂದಿಗೆ ಸಮುದಾಯದ ವಿಶೇಷ ಭಕ್ತಿ ಮತ್ತು ಗೌರವ ಸಂಬಂಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಗುರುವಂದನಾ ಸಮಿತಿ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

maithri

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೇ 6ರಂದು ಶ್ರೀಗಳು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಭವ್ಯ ಸ್ವಾಗತ ಕೋರಲಾಗುವುದು. ಮೇ 7ರಂದು ಬಪ್ಪಳಿಗೆ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಗುರುವಂದನೆ ಮತ್ತು ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದರು.

ಬಂಟ ಸಮಾಜದ ಅನೇಕ ಕುಟುಂಬಗಳಲ್ಲಿ ಪ್ರಶ್ನಾ ಚಿಂತನೆ ಸಂದರ್ಭದಲ್ಲಿ ಗುರುಗಳ ಆಶೀರ್ವಾದ ಪಡೆಯುವ ಮಹತ್ವ ಹೆಚ್ಚಿದ್ದು, ಸಾಮಾನ್ಯವಾಗಿ ಶೃಂಗೇರಿ ಕ್ಷೇತ್ರಕ್ಕೆ ಭೇಟಿ ನೀಡಲಾಗುತ್ತದೆ. ಇಂತಹ ಸಂದರ್ಭದಲ್ಲಿ ಗುರುಗಳು ಪುತ್ತೂರಿಗೆ ಆಗಮಿಸುತ್ತಿರುವುದು ಅಪರೂಪದ ಅವಕಾಶವಾಗಿದ್ದು, ಸಮಾಜದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಾದ ಪಡೆಯುವಂತೆ ವಿನಂತಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಧರ್ಮಾಭ್ಯುದಯ ತಾಲೂಕು ಸಮಿತಿ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಪುತ್ತೂರು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ನಿರ್ದೇಶಕರಾದ ರವಿಪ್ರಸಾದ್ ಶೆಟ್ಟಿ ಮತ್ತು ಗಂಗಾಧರ ರೈ ಎಲಿಕ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…