ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಇದರ ಪರಿಹಾರ ಹಾಗೂ ಲೋಕಕಲ್ಯಾಣಕ್ಕಾಗಿ ಮೇ 12ರಂದು ಬೆಳಿಗ್ಗೆ 9.30ರಿಂದ 11.30ರವರೆಗೆ ಮೃತ್ಯುಂಜಯ ಸೂಕ್ತ ಜಪ 1008 ನಡೆಯಲಿದೆ.
ಪ್ರಧಾನ ಅರ್ಚಕ ವಸಂತ ಕೆದಿಲಾಯ ಹಾಗೂ ಜಯರಾಮ ಜೋಯಿಸರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಅನೇಕ ವೈದಿಕರಿಂದ ಮೃತ್ಯುಂಜಯ ಜಪ ಸೂಕ್ತ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.























