tamanvi
ಧಾರ್ಮಿಕ

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ ಸೂಕ್ತ ಜಪ 1008 ನಡೆಯಿತು.

maithri

smt

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಜಪ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪ್ರಧಾನ ಅರ್ಚಕ ವಸಂತ ಕೆದಿಲಾಯ ಹಾಗೂ ಜಯರಾಮ ಜೋಯಿಸರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.

ಮುಂದೆ ಯಾವುದೇ ಅನಾಹುತ, ಮೃತ್ಯು ಕಂಟಕ ಆಗದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗೂ ಪೂಜೆ ನಡೆದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts