ಎಡನೀರು ಶ್ರೀಗಳ ಆರನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಸಮಿತಿಯ ಪುತ್ತೂರು ಘಟಕದ ಸಭೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಗೌರವಾಧ್ಯಕ್ಷ ಬಲರಾಮ ಆಚಾರ್ಯ ಮಾತನಾಡಿ, ಚಾತುರ್ಮಾಸ್ಯದ ಅವಧಿಯಲ್ಲಿ ನಿರಂತರ ಜರಗುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅನ್ನ ಸಂತರ್ಪಣೆಗೆ ಶ್ರೀಮಠಕ್ಕೆ ನಿಧಿ ಸಮರ್ಪಣೆ ಮಾಡಲು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.
ಪುತ್ತೂರು ಸಮಿತಿಯ ಅಧ್ಯಕ್ಷ ಯು. ಪೂವಪ್ಪ, ಪ್ರೊ.ಎ.ವಿ. ನಾರಾಯಣ, ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ರವಿ ರೈ, ರೂಪೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಚಾತುರ್ಮಾಸ್ಯದ ಆಮಂತ್ರಣವನ್ನು ಸಭೆಯಲ್ಲಿ ವಿತರಿಸಲಾಯಿತು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ ವಂದಿಸಿದರು.






















