ಧಾರ್ಮಿಕ

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.

ಹಿಂದೂ ಧರ್ಮದ ಚಟುವಟಿಕೆಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನ ಪ್ರಮುಖರು, ಸಂತರ ಜೊತೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಭೇಟಿ ನೀಡಿರುವ ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

vhp

vhp

ಗುರುವಾರ ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಾಗಿ, ದೇವರ ದರ್ಶನ ಪಡೆದುಕೊಂಡರು. ಬಳಿಕ ಮಠಕ್ಕೆ ಭೇಟಿ ನೀಡಿ, ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಜೊತೆ ಸಮಾಲೋಚನೆ ನಡೆಸಿ, ಮಂತ್ರಾಕ್ಷತೆ ಪಡೆದುಕೊಂಡರು. ನಂತರ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡು ಹರ್ಷೆಂದ್ರ ಕುಮಾರ್ ಧರ್ಮಸ್ಥಳ ಅವರ ಜೊತೆ ಮಾತುಕತೆ ನಡೆಸಿದರು.

ಮೂಲತಃ ದೆಹಲಿಯವರಾದ ಅಲೋಕ್ ಕುಮಾರ್ ಅವರು ನವದೆಹಲಿಯ ಶಾಸಕರಾಗಿ, ವಿಧಾನಸಭೆ ಉಪಸಭಾಪತಿ ಆಗಿ ಗಮನಾರ್ಹ ಕೆಲಸ ಮಾಡಿದವರು. ದೆಹಲಿ ಹೈಕೋರ್ಟ್ ಹಾಗೂ ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲರಾಗಿರುವ ಇವರು, ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಮೈಗೂಡಿಸಿಕೊಂಡವರು. ಆರ್.ಎಸ್.ಎಸ್., ಬಿಜೆಪಿಯಲ್ಲಿ ಹಲವು ರಾಜ್ಯ, ರಾಷ್ಟ್ರಮಟ್ಟದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ದೆಹಲಿಯ ಆರ್.ಎಸ್.ಎಸ್. ಸಹಸಂಘಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯತೆಯನ್ನು ಉತ್ತೇಜಿಸುವ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಇದೀಗ ಧಾರ್ಮಿಕ ಕಾರ್ಯಕ್ರಮಗಳ ಸಮಾಲೋಚನೆ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಭೇಟಿ ಸಂದರ್ಭ ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ | ಧರ್ಮದೇವತೆಗಳಿಗೆ ಪರ್ವ ಸೇವೆ, ಬಲಿಯೇಂದ್ರ ಪೂಜೆ

ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿರುವಂತೆಯೇ,…

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕರಾವಳಿಯ ವಿಶಿಷ್ಟ ಕಾರ್ಯಕ್ರಮವಾಗಿ ಪುತ್ತೂರು ದೀಪೋತ್ಸವ 2026 | ಲೋಗೋ, ಆಮಂತ್ರಣ ಬಿಡುಗಡೆಗೊಳಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…