ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ.
ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವ ಹಿನ್ನೆಲೆಯಲ್ಲಿ ಈ ಸೇವೆಗಳನ್ನು ನಡೆಸಲಾಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಉಳಿದಂತೆ ದೇವರ ದರ್ಶನ, ಮಂಗಳಾರತಿ, ಅರ್ಚನೆ, ಮಹಾಪೂಜೆ ಸೇರಿದಂತೆ ಇತರ ಎಲ್ಲ ಪೂಜಾ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇಗುಲದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.































