tamanvi
ಧಾರ್ಮಿಕ

ಉಡುಪಿ: ಸೆ.14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಗಣೇಶೋತ್ಸವ ಹಾಗೂ ಗಣೇಶ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ವಿವಿಧ ಅವಧಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೆ.14ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೆ.16ರಂದು ಅಪರಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೆ.18ರಂದು ಅಪರಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಗಣೇಶ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಣೇಶೋತ್ಸವ ಹಾಗೂ ವಿಸರ್ಜನಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶವನ್ನು ಜಾರಿಗೊಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts