ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನದಾನ ಸೇವೆಗೆ ಪ್ರತೀ ತಿಂಗಳಿನಂತೆ ಸೆಪ್ಟೆಂಬರ್ ತಿಂಗಳ ಅಗತ್ಯ ಆಹಾರ ಸಾಮಗ್ರಿಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಸೆ. 12ರಂದು ಸಮರ್ಪಿಸಲಾಯಿತು.
ದೇವಸ್ಥಾನದ ಅನ್ನದಾನ ಸೇವೆಗೆ ಅಗತ್ಯವಿರುವ 271 ಕೆ.ಜಿ. ಅಕ್ಕಿ, 30 ಕೆ.ಜಿ. ಸಕ್ಕರೆ, 30 ಕೆ.ಜಿ. ಸಾಂಬಾರ್ ಪದಾರ್ಥ ಹಾಗೂ 200 ಕೆ.ಜಿ. ಬೆಲ್ಲ ಸೇರಿದಂತೆ ಒಟ್ಟು ₹31,310 ಮೌಲ್ಯದ ಸಾಹಿತ್ಯಗಳನ್ನು ಸಮಿತಿಯ ವತಿಯಿಂದ ನೀಡಲಾಯಿತು.
ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನ್ನದಾನ ಸೇವೆ ನಿರಂತರವಾಗಿ ನಡೆಯಲು ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಸಮಿತಿ ತನ್ನ ಸೇವಾ ಕಾರ್ಯವನ್ನು ಮುಂದುವರಿಸಿದೆ.
ಭಕ್ತರು ಹಾಗೂ ದಾನಿಗಳ ಸಹಕಾರದಿಂದ ದೇವಸ್ಥಾನದ ಅನ್ನದಾನ ಸೇವೆ ನಿರಂತರವಾಗಿ ನಡೆಯುತ್ತಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ.
























