tamanvi
ಧಾರ್ಮಿಕ

ಸಂಪ್ಯ: ಸೆ.14, 15ರಂದು 44ನೇ ವರ್ಷದ ಶ್ರೀ ಗಣೇಶೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

‎ಪುತ್ತೂರು: ಸಂಪ್ಯದ ನವಚೇತನ ಯುವಕ ಮಂಡಲದ ವತಿಯಿಂದ 44ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14 ಮತ್ತು 15ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮಗಳು ಜರಗಲಿದ್ದು, ಸೆ.14ರಂದು ಬೆಳಗ್ಗೆ ಗಣೇಶ ಪ್ರತಿಷ್ಠಾಪನೆ, ಗಣಹೋಮ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅದೇ ದಿನ ಬೆಳಗ್ಗೆ 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಅತಿಥಿಗಳು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 7:00ರಿಂದ ತಾಂಬೂಲ ಕಲಾವಿದೆರ್,ಪುಂಜಾಲಕಟ್ಟೆ-ಕುಡ್ಲ ಇವರಿಂದ ಎಲ್ಲೆ ದಾದ ಏರೆಗ್ ಗೊತ್ತು ತುಳು ಹಾಸ್ಯಮಯ ನಾಟಕ ನಡೆಯಲಿದೆ. ರಾತ್ರಿ ಗಂಟೆ 9:00ರಿಂದ ಅನ್ನಸಂತರ್ಪಣೆ ನಡೆಯಲಿದೆ.

ಸೆ.15ರಂದು ಬೆಳಗ್ಗೆ ಗಣಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ, ಬಳಿಕ ಕ್ರೀಡಾಕೂಟ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಸಂಜೆ 3 ಗಂಟೆಯಿಂದ ಶ್ರೀ ದೇವರ ಶೋಭಾಯಾತ್ರೆ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts