tamanvi
ಧಾರ್ಮಿಕ

ಬಂದಾರಿನಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬಂದಾರು, ಸೆ.14: ಶಿವಗೆಳೆಯರ ಬಳಗ (ರಿ.) ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.) ಮೈರೋಳ್ತಡ್ಕ–ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಂದು ಮೈರೋಳ್ತಡ್ಕ ವಠಾರದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ಬಳಿಕ ಶಿವಾಜಿ ಫ್ರೆಂಡ್ಸ್ ನೇತೃತ್ವದಲ್ಲಿ ಶಿವನಗರ ಸರ್ಕಲ್ ಬಳಿಯಿರುವ ಶಿವಾಜಿ ಪ್ರತಿಮೆಗೆ ಶಾಸಕರು ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಶ್ರೀದೇವಿ ಪ್ರತಿಷ್ಠಾನದ ಅಧ್ಯಕ್ಷ ಕಿರಣ್ ಚಂದ್ರ ಪುಷ್ಪಗಿರಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಿವಗೆಳೆಯರ ಬಳಗದ ಅಧ್ಯಕ್ಷ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷ ದಾಮೋದರ ಗೌಡ ಚಾಕೋಟೆದಡಿ, ಕಾರ್ಯದರ್ಶಿ ಚೇತನ್ ಗೌಡ ಕುರಿಯಾಳ, ಜೊತೆ ಕಾರ್ಯದರ್ಶಿ ಚಿದಾನಂದ ಗೌಡ ಪಾಂಜಾಳ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಕೊಳ್ಳಕೋಡಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಗಣೇಶೋತ್ಸವದ ಅಂಗವಾಗಿ ಬೆಳಗ್ಗೆ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗಣಹೋಮ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಪಾಂಚಜನ್ಯ ಗೆಳೆಯರ ಬಳಗ ಪಾಂಜಾಳ ಮತ್ತು ಶ್ರೀ ಸದಾಶಿವ ಭಜನಾ ಮಂಡಳಿ ಕುರಾಯ ವತಿಯಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಲಕ್ಕಿಡಿಪ್ ಡ್ರಾ ನಡೆಯಿತು. ಭಾರತ ಮಾತೆಯ ಭಾವಚಿತ್ರದೊಂದಿಗೆ ಮಕ್ಕಳ ಕುಣಿತ ಭಜನೆ, ಚೆಂಡೆ ವಾದನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದ ಮೆರವಣಿಗೆ ನಡೆಯಿತು.

ಮೆರವಣಿಗೆಯ ಮಾರ್ಗದ ಇಕ್ಕೆಲಗಳಲ್ಲಿ ಪೂಜೆ ಹಾಗೂ ಪ್ರಸಾದ ವಿತರಣೆ, ಸಿಹಿತಿಂಡಿ, ಪಾನೀಯ ಮತ್ತು ಫಲಾಹಾರದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ವೈಭವದ ಮೆರವಣಿಗೆ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಗಣೇಶ ಮೂರ್ತಿಯ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts