tamanvi
ಧಾರ್ಮಿಕ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ

ಈ ಸುದ್ದಿಯನ್ನು ಶೇರ್ ಮಾಡಿ

ಮೊಗ್ರು, ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ.17ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸಂಕ್ರಮಣ ಪರ್ವ ಸೇವೆಯ ಶುಭ ಗಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆ ಹಾಗೂ ಪ್ರಾರ್ಥನಾ ಸೇವೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts