tamanvi
ಧಾರ್ಮಿಕ

ಬೆಳಾಲು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಾಮೂಹಿಕ ತುಪ್ಪದ ದೀಪ ಬೆಳಗಿಸಿ ಪ್ರಾರ್ಥನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಾಲು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರವ್ಯಾಪಿ ಆಯೋಜಿಸಲಾಗಿದ್ದ ‘ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸೆ.17ರಂದು ಸಾಮೂಹಿಕವಾಗಿ ತುಪ್ಪದ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಕ್ಷೇತ್ರದಲ್ಲಿ ನಡೆದ ವಿಶೇಷ ಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಲಭಿಸಲಿ ಮತ್ತು ದೇಶವನ್ನು ಮುನ್ನಡೆಸಲು ಶಕ್ತಿ ದೊರೆಯಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅಸ್ರಣ್ಣ ಗಿರೀಶ್ ಬಾರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಬಿಜೆಪಿ ಜಿಲ್ಲಾ ಮನ್ ಕೀ ಬಾತ್ ಸಂಯೋಜಕ ಸೀತಾರಾಮ್ ಬಿ.ಎಸ್., ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ರಂಜಿತ್ ಉಪ್ಪಾರು, ಯಶೋಧರ ಗೌಡ ಅಳಕ್ಕೆದಡ್ಡ, ರಾಜೇಶ್ ಗೌಡ ಪಾರಳ, ದಿನೇಶ್ ದರ್ಖಾಸ್, ಯಶೋಧರ ಅನಂತೋಡಿ, ಶಿವಪ್ರಸಾದ್ ಸೇರಿದಂತೆ ಭಕ್ತಾದಿಗಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts