tamanvi
ಧಾರ್ಮಿಕ

ಧರ್ಮಾಭ್ಯುದಯ – ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕು ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಲಾಯಿತು.

ಜಗದ್ಗುರುಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ‌ ನಿರತರಾಗಿರುವ ಈ ಸಮಯದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಧಾನಂಗಳವರ ಆಶೀರ್ವಾದ ಹಾಗೂ ಮಂತ್ರಾಕ್ಷತೆಯನ್ನು ಪಡೆದುಕೊಳ್ಳಲಾಯಿತು.

ತಾಲೂಕು ಧರ್ಮಾಭ್ಯುದಯ ಸಮಿತಿಯ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಪ್ರಧಾನ‌ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್, ಸಂಚಾಲಕ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ಶೈಲೇಶ್ ಜಿ. ರಾವ್. ವಿವಿಧ ಗ್ರಾಮ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಶೃಂಗೇರಿ ಪೀಠದ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ರಾಜ್ಯ ಸಂಚಾಲಕ ವಿದ್ವಾನ್ ತೇಜಶಂಕರ ಸೋಮಯಾಜಿ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts