tamanvi
ಧಾರ್ಮಿಕ

ಅ.17ರಂದು ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರೆಗೆ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ: ಕೊಡಗಿನ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಈ ಬಾರಿ ಕಾವೇರಿ ಮಾತೆಯ ತೀರ್ಥೋದ್ಭವ ಅ.17ರಂದು ರಾತ್ರಿ 7.50ಕ್ಕೆ ಮೇಷ ಲಗ್ನದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾಗಮಂಡಲ–ತಲಕಾವೇರಿ ಜಾತ್ರಾ ಮಹೋತ್ಸವದ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ದಿನಾಂಕ ಹಾಗೂ ಸಮಯವನ್ನು ಘೋಷಿಸಲಾಯಿತು.

ಸೆ.27ರಂದು ಬೆಳಗ್ಗೆ 8.45ಕ್ಕೆ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತುಲಾ ಲಗ್ನದಲ್ಲಿ ಪ್ರತ್ಯೇಕ ಅಕ್ಷಿ ನಡೆಯಲಿದೆ. ಅ.5ರಂದು ಬೆಳಗ್ಗೆ 10.35ಕ್ಕೆ ವೃಷಭ ಲಗ್ನದಲ್ಲಿ ಆಜ್ಞಾ ಮುಹೂರ್ತ ನೆರವೇರಲಿದೆ.

ಅ.15ರಂದು ಮಧ್ಯಾಹ್ನ 12.35ಕ್ಕೆ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಪೂಜೆ ಹಾಗೂ ಸಂಜೆ 6.30ಕ್ಕೆ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿ ಪೂಜೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾಗಿರುವ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಕೊಡಗು ಸೇರಿದಂತೆ ವಿವಿಧೆಡೆಯಿಂದ ಭಕ್ತರು ತಲಕಾವೇರಿಗೆ ಆಗಮಿಸುವ ನಿರೀಕ್ಷೆಯಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts